ಕನ್ನಡಪ್ರಭ ವಾರ್ತೆ ಹುಕ್ಕೇರಿ
ತಾಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಭಾನುವಾರ ನಡೆದ ಅರಿಹಂತ ಸೌಹಾರ್ದ ಸಹಕಾರಿ ಸಂಘದ 26ನೇ ವಾರ್ಷಿಕ ಮಹಾಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಸೇವಾನಿರತ ಈ ಬ್ಯಾಂಕ್ ಸದಸ್ಯರ ವಿಶ್ವಾಸ ಗಳಿಸಿ ಗ್ರಾಹಕ ಸ್ನೇಹಿಯಾಗಿ ಹೊರಹೊಮ್ಮಿದೆ. ಅನೇಕ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಚೌಗಲಾ ಮಾತನಾಡಿ, ಬರುವ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಮತ್ತಷ್ಟು ಗುಣಮಟ್ಟದ ಸೇವೆ ನೀಡಿ ₹6 ಕೋಟಿ ನಿವ್ವಳ ಲಾಭ ಗಳಿಸುವ ಗುರಿ ಹೊಂದಲಾಗಿದೆ ಜೊತೆಗೆ ಇನ್ನೆರೆಡು ಶಾಖೆ, ಕಲ್ಯಾಣ ಮಂಟಪ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದರು.ಪ್ರಧಾನ ವ್ಯವಸ್ಥಾಪಕ ಆನಂದ ಚೌಗಲಾ ಮಾತನಾಡಿ, ಪ್ರಧಾನ ಕಚೇರಿ ಸೇರಿ ಬ್ಯಾಂಕ್ ಒಟ್ಟು 11 ಶಾಖೆಗಳನ್ನು ಹೊಂದಿರುವ ಬ್ಯಾಂಕ್ ಒಟ್ಟು 18430 ಸದಸ್ಯರನ್ನು ಹೊಂದಿದ್ದು 2024-25ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಒಟ್ಟು ₹1992 ಕೋಟಿ ವಹಿವಾಟು ನಡೆಸಿದೆ. ₹1.17 ಕೋಟಿ ಶೇರು ಬಂಡವಾಳವಿದೆ. ₹30 ಕೋಟಿ ಕಾಯ್ದಿಟ್ಟ ಹಾಗೂ ಇತರೆ ನಿಧಿಗಳಿದ್ದು. ₹327 ಕೋಟಿ ದುಡಿಯುವ ಬಂಡವಾಳವಿದೆ. ₹214 ಕೋಟಿ ಸಾಲ ವಿತರಿಸಲಾಗಿದೆ. ₹296 ಕೋಟಿ ಠೇವುಗಳಿದ್ದು ₹113 ಕೋಟಿ ಗುಂತಾವಣೆಗಳಿವೆ. ₹5.72 ಕೋಟಿ ನಿವ್ಹಳ ಲಾಭ ಗಳಿಸಿದ್ದು ಶೇ.25ರಷ್ಟು ಲಾಭಾಂಶ ವಿತರಿಸಲಾಗಿದೆ. ಶೇ.97ರಷ್ಟು ಸಾಲ ವಸೂಲಾಗಿದ್ದು ಅಡಿಟ್‌ನಲ್ಲಿ ಎ ಕ್ಲಾಸ್ ಬಂದಿದೆ ಎಂದರು.