ಕನ್ನಡಪ್ರಭ ವಾರ್ತೆ ಬೀದರ್
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಪಟ್ಟಣ, ನಗರ ಪ್ರದೇಶಗಳು ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ತಮ್ಮ ಅವಧಿಯಲ್ಲಿ ಬೀದರ್ ಜಿಲ್ಲೆಗೆ ವಿಶೇಷ ಆದ್ಯತೆ ಕೊಡಲಾಗಿದೆ. ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಹುಮನಾಬಾದ್ ಪುರಸಭೆಗೆ ನಗರಸಭೆ, ಹುಲಸೂರು, ಮನ್ನಾಎಖ್ಖೆಳ್ಳಿ ಹಾಗೂ ಕಮಠಾಣ ಗ್ರಾಮ ಪಂಚಾಯಿತಿಗಳಿಗೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಹಿಂದೆ ಬಸವಕಲ್ಯಾಣ ಶಾಸಕರು ಹುಲಸೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಬೇಡಿಕೆ ಮಂಡಿಸಿದ್ದರು. ಆದರೆ, ಹಿಂದಿನ ಅವರದ್ದೆ ಬಿಜೆಪಿ ಸರ್ಕಾರ ಪ್ರಸ್ತಾವವನ್ನು ತಿರಸ್ಕರಿಸಿತ್ತು. ಕಾಂಗ್ರೆಸ್ ಸರ್ಕಾರ ಜನರ ಭಾವನೆಗೆ ಸ್ಪಂದಿಸಿ ಹುಲಸೂರು ಗ್ರಾಮ ಪಂಚಾಯಿತಿಗೆ ಪಟ್ಟಣ ಪಂಚಾಯಿತಿ ಸ್ಥಾನಮಾನ ಕೊಡಲು ನಿರ್ಣಯಿಸಿದೆ ಎಂದು ಸಚಿವ ರಹೀಂ ಖಾನ್ ಹೇಳಿದ್ದಾರೆ.
ಬೆಂಗಳೂರು: ಬೀದರ್ ಜಿಲ್ಲೆಯ ಮೂರು ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಸಮ್ಮತಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
ಈ ನಿರ್ಣಯದಿಂದಾಗಿ ಜಿಲ್ಲೆಯ ಈ ಮೂರೂ ಸ್ಥಳಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯಾವುದೇ ಭೇದವಿಲ್ಲದೆ ನಿಷ್ಪಕ್ಷಪಾತವಾಗಿ ಬೀದರ್ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೀದರ್ :
ಕಮಠಾಣಾ ಹಾಗೂ ಮನ್ನಾಎಖೆಳ್ಳಿ ಗ್ರಾ.ಪಂಗಳನ್ನು ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೆರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ದಕ್ಷಿಣ ಕ್ಷೇತ್ರವು ಸಂಪೂರ್ಣ ಹಳ್ಳಿಗಳಿಂದಲೇ ಕೂಡಿದೆ. ಮೊದಲ ಬಾರಿಗೆ ಇಲ್ಲಿ ಎರಡು ಹೋಬಳಿ ಕೇಂದ್ರಗಳಿಗೆ ಪಟ್ಟಣ ಪಂಚಾಯಿತಿ ಭಾಗ್ಯ ದೊರಕಿದೆ. ಹೆಚ್ಚು ಜನಸಂಖ್ಯೆ ಇರುವ ಎರಡೂ ಗ್ರಾಮಗಳ ಜನತೆಗೆ ಉತ್ತಮ ಮೂಲಸೌಕರ್ಯ ಒದಗಿಸಿ ಹೆಚ್ಚಿನ ಅಭಿವೃದ್ಧಿಪಡಿಸಲು ಇದರಿಂದ ಬಲ ತುಂಬಿದಂತಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.