ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಾನವ ಸರಪಳಿ

KannadaprabhaNewsNetwork | Published : Aug 13, 2024 12:54 AM

ಸಾರಾಂಶ

ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಬೃಹತ್‌ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಬೃಹತ್‌ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರ ನೆರವಿಗೆ ಭಾರತ ಸರ್ಕಾರ ಹಾಗೂ ವಿಶ್ವ ಸಮುದಾಯ ಧಾವಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ ಸತೀಶ್ ಪ್ರಭು, ಹಿಂದುಗಳ ಮೇಲೆ ದಾಳಿ, ಹಿಂದುಗಳ ಮನೆಗಳಿಗೆ ಬೆಂಕಿ ಹಾಕುವುದು, ಹಿಂದು ದೇವಾಲಯ, ವಾಣಿಜ್ಯ ಸಂಸ್ಥೆಗಳ ಮೇಲೆ ಅವ್ಯಾಹತವಾಗಿ ದಾಳಿ ನಡೆಸಲಾಗುತ್ತಿದೆ. ಹಿಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ. ಬಾಂಗ್ಲಾ ಹಿಂದುಗಳ ವಿರುದ್ಧದ ಈ ದಾಳಿಯನ್ನು ಸರ್ವರೂ ಖಂಡಿಸಬೇಕು. ವಿಶ್ವ ಮಾನವ ಹಕ್ಕುಗಳ ಆಯೋಗ, ಸಂಘಟನೆಗಳು ಧ್ವನಿಯೆತ್ತಬೇಕು ಎಂದರು.

ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಕಾರ್ಯದರ್ಶಿ ಪೂರ್ಣಿಮಾ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಮೇಯರ್‌ಗಳಾದ ದಿವಾಕರ ಪಾಂಡೇಶ್ವರ, ಕವಿತಾ ಸನಿಲ್, ವಿವಿಧ ಸಂಘಟನೆಗಳ ಪ್ರಮುಖರಾದ ನಿತಿನ್‌ ಕುಮಾರ್, ಶಿವಾನಂದ ಮೆಂಡನ್, ಜಗದೀಶ ಶೇಣವ, ಭುಜಂಗ ಕುಲಾಲ್, ಗಿರಿಪ್ರಕಾಶ್ ತಂತ್ರಿ, ಹನುಮಂತ ಕಾಮತ್, ರಮೇಶ್ ಕಂಡೆಟ್ಟು, ಮಂಜುಳಾ ರಾವ್, ನಂದನ್ ಮಲ್ಯ ಇದ್ದರು.

Share this article