ಮಾನವ ಸರಪಳಿಯಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು, ಸಿಬ್ಬಂದಿ ಕೈ ಜೋಡಿಸಲಿದ್ದಾರೆ. ಸುಮಾರು 24000 ಮಂದಿ ಪಾಲ್ಗೊಳ್ಳಲಿದ್ದಾರೆ.
ಕನ್ನಡಪ್ರಭ ವಾರ್ತೆ ಕಾರ್ಕಳ
ಕಾಪು ಮತ್ತು ಕಾರ್ಕಳ ತಾಲೂಕು ಆಡಳಿತ ವತಿಯಿಂದ ಕಾಪು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದ ಬ್ರಿಡ್ಜ್ನಿಂದ ಹೆಜಮಾಡಿ ಟೋಲ್‌ಗೇಟ್ ದಾಟಿ ಶಾಂಭವಿ ಬ್ರಿಡ್ಜ್‌ವರೆಗೆ ಮಾನವ ಸರಪಳಿ ರಚಿಸಲಾಗುತ್ತದೆ. ಸೆ.15ರಂದು ಜರುಗಲಿರುವ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದೆ.
ಮಾನವ ಸರಪಳಿಯಲ್ಲಿ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ನಾನಾ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೈ ಜೋಡಿಸಲಿದ್ದಾರೆ. ಉತ್ತರದಲ್ಲಿ ಉಡುಪಿ ತಾಲೂಕು ಮತ್ತು ದಕ್ಷಿಣದಲ್ಲಿ ಮಂಗಳೂರು ಜಿಲ್ಲೆಯ ಸರಪಳಿ ಜೋಡಣೆಯಾಗಲಿದೆ ಎಂದು ಕಾರ್ಕಳ ತಹಸೀಲ್ದಾರ್ ಪ್ರತಿಭಾ ಆರ್. ತಿಳಿಸಿದರು.
ಅವರು ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಪು ಮತ್ತು ಕಾರ್ಕಳ ತಾಲೂಕಿನಲ್ಲಿ ಸುಮಾರು 24000 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾಪು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್ ಡಿ’ಸಿಲ್ವ ಮಾತನಾಡಿ ಜಾತ್ಯಾತೀತ, ಧರ್ಮಾತೀತ, ಪಕ್ಷಾತೀತವಾಗಿ ಎಲ್ಲರೂ ಮಾನವ ಸರಪಳಿಯಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದ ರೂಪುರೇಷೆಯನ್ನು ವಿವರಿಸಿದರು. ಸಭೆಯಲ್ಲಿ ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೇಶ್ ದೇವಾಡಿಗ, ಪ್ರಶಾಂತ್ ಕೋಟ್ಯಾನ್, ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.