ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರು, ಸರ್ಕಾರೇತರ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸೆ.೧೫ರ ಬೆಳಗ್ಗೆ 8.30ಕ್ಕೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವೀರೇಶನಗರದಿಂದ ಆಲಮಟ್ಟಿಯವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಮಾನವ ಸರಪಳಿ ನಿರ್ವಹಣೆಗೆ ೯ ಜನ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ೧೪ ಜನ ಸೆಕ್ಟರ್ ಅಧಿಕಾರಿಗಳು ಹಾಗೂ ಪ್ರತಿ ಕಿಮೀಗೆ ಓರ್ವರಂತೆ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡಲ್ ಅಧಿಕಾರಿಗಳು ಸೇರಿದಂತೆ ತಹಸೀಲ್ದಾರ್, ತಾಪಂ ಇಒ ಒಳಗೊಂಡಂತೆ ಯೋಜನೆ ಸಿದ್ಧಪಡಿಸಿ ಗ್ರಾಮಗಳಲ್ಲಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಸಮೀಪದಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಬಾಕ್ಸ್
ಕಾರ್ಯಕ್ರಮದಲ್ಲಿ ಅಂದಾಜು ೬೦ ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಮಾನವ ಸರಪಳಿ ಹಾದು ಹೋಗುವ ಮಾರ್ಗಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗದಂತೆ ಗಮನ ಹರಿಸಬೇಕು. ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆಗೆ ಕ್ರಮ ವಹಿಸಬೇಕು. ಪ್ರತಿ ಕಿಮೀಗೆ ಬಣ್ಣ ಹಚ್ಚಿ ಗುರುತು ಮಾಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಸಾರ್ವಜನಿಕರ ಸುರಕ್ಷತೆಗೆ ಗಮನ ಹರಿಸಬೇಕು. ನಿಯೋಜಿತ ಅಧಿಕಾರಿಗಳು ಸಮನ್ವಯತೆಯಿಂದ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಆದ್ಯತೆ ಮೇಲೆ ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸಬೇಕು. ಯಾವುದೇ ಸಮಸ್ಯೆಯಾದಲ್ಲಿ ಮಾರ್ಗಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.