ಮನುಷ್ಯನ ದುರಾಸೆಗೆ ಪರಿಸರ ನಾಶ

KannadaprabhaNewsNetwork |  
Published : Jun 06, 2025, 12:37 AM IST
5ಕೆಪಿಎಲ್22 ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ | Kannada Prabha

ಸಾರಾಂಶ

ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಪರಿಸರ ರಕ್ಷಣೆಗೆ ಮೊದಲ ಹೆಜ್ಜೆ.

ಕೊಪ್ಪಳ:

ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಮಾನವನಿಂದಲೇ ಸರಿಯಾಗಬೇಕಿದೆ. ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಪರಿಸರ ರಕ್ಷಣೆಗೆ ಮೊದಲ ಹೆಜ್ಜೆ. ಬಳಕೆಯನ್ನು ಕಡಿಮೆ ಮಾಡುವ ಶಪಥ ಮಾಡುವ ಮೂಲಕ ಈ ದಿನವನ್ನು ಆಚರಣೆ ಮಾಡೋಣ. ಪ್ಲಾಸ್ಟಿಕ್ ಬಳಕೆ ತಗ್ಗಿಸಿದರೆ ಭವಿಷ್ಯದ ಪೀಳಿಗೆಗೆ ಪರಿಸರ ಉಳಿಯುತ್ತದೆ ಎಂದರು.

ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಕೆ.ವಿ. ಪ್ರಸಾದ್, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್. ಛತ್ರದ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಿಗುರು ಸಂಭ್ರಮ:

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗುರುವಾರ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ "ಚಿಗುರು ಸಂಭ್ರಮ 2025 " ಕಾರ್ಯಕ್ರಮ ನಡೆಯಿತು. ಕೊಪ್ಪಳ ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಅವರು ಸಸಿಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಆನಂತರ ಸಂಸ್ಥೆಯ ಆವರಣದಲ್ಲಿ ನಿರ್ದೇಶಕರು, ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಿಂದ ವಿವಿಧ ಕಡೆಗಳಲ್ಲಿ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ರಚಿಸಿದ ಪರಿಸರ ಕಾಳಜಿಯ ಬಗೆಗಿನ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳಿಗಾಗಿ ಘೋಷಣೆಗಳನ್ನು ಹಾಗೂ ಪರಿಸರದ ಬಗ್ಗೆ ಕ್ವಿಜ್ ಸ್ಪರ್ಧೆ ಏರ್ಪಡಿಸಲಾಗಿತ್ತು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ