ಪರಿಸರ ಇದ್ದರೆ ಮಾನವ ಬದುಕು: ವಸಂತಕುಮಾರಿ

KannadaprabhaNewsNetwork |  
Published : Jul 09, 2025, 12:18 AM IST
ತಾಲೂಕಿನ ಹಬ್ಬನಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅಧ್ಯಕ್ಷತೆ ವಹಿಸಿ    ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಕುಮಾರಿ ಮಾತನಾಡಿದರು | Kannada Prabha

ಸಾರಾಂಶ

ಅರಸೀಕೆರೆ: ಮಾನವನ ಬದುಕು ಮತ್ತು ಜೀವಕ್ಕೆ ಉತ್ತಮ ಪರಿಸರ ನಿರ್ವಹಣೆಯಿಂದ ಮಾತ್ರ ಸಾಧ್ಯ ಎಂದು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಕುಮಾರಿ ಅಭಿಪ್ರಾಯಪಟ್ಟರು.

ಅರಸೀಕೆರೆ: ಮಾನವನ ಬದುಕು ಮತ್ತು ಜೀವಕ್ಕೆ ಉತ್ತಮ ಪರಿಸರ ನಿರ್ವಹಣೆಯಿಂದ ಮಾತ್ರ ಸಾಧ್ಯ ಎಂದು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಕುಮಾರಿ ಅಭಿಪ್ರಾಯಪಟ್ಟರು.

ತಾಲೂಕಿನ ಹಬ್ಬನಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಹಲವು ಯೋಜನೆಗಳು ಆರ್ಥಿಕ ದುರ್ಬಲರಿಗೆ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ದೇವಾಲಯಗಳ ಜೀರ್ಣೋದ್ಧಾರ ಕೆರೆಕಟ್ಟೆಗಳ ಅಭಿವೃದ್ಧಿ ಮೊದಲಾದವನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಪತ್ರಕರ್ತ ಎಚ್. ಡಿ. ಸೀತಾರಾo ಶ್ರೀ ಧರ್ಮಸ್ಥಳ ಕ್ಷೇತ್ರವು ಹಲವು ಜನಪರ ಯೋಜನೆಗಳನ್ನು ಕೆಲಸಗಳನ್ನು ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಾಡುತ್ತಾ ಬಂದಿದೆ. ಮದ್ಯವ್ಯಸನಿಗಳನ್ನು ಅದರಿಂದ ಹೊರ ತರುವಂತಹ ಶಿಬಿರಗಳು ಶ್ಲಾಘನೀಯ. ಶೈಕ್ಷಣಿಕ ಸಾಮಾಜಿಕ ಆರ್ಥಿಕವಾಗಿ ಸಮಾಜವನ್ನು ಅದರಲ್ಲೂ ಮಹಿಳೆಯರನ್ನು ಸದೃಢರನ್ನಾಗಿ ಮಾಡುವಲ್ಲಿ ಅನೇಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಮಾಡಿ ಯಶಸ್ವಿ ಆಗುತ್ತಿದೆ. ಸ್ವಾಸ್ಥ್ಯ ಸಮಾಜಕ್ಕಾಗಿ ತಂಬಾಕು ಮತ್ತು ಮಧ್ಯದಿಂದ ದೂರ ಇರುವಂತೆ ಸಮಾಜವನ್ನು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಸಹ ನಿರಂತರವಾಗಿ ನಡೆಯುತ್ತಿದೆ ಎಂದರು.

ಧರ್ಮಸ್ಥಳ ಗ್ರಾಮ್ಯ ಅಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಗುರುಮೂರ್ತಿ ಶ್ರೀ ಕ್ಷೇತ್ರದ ವತಿಯಿಂದ ಕೃಷಿಗೆ ಸಂಬಂಧಿಸಿದಂತೆ ಮತ್ತು ಕೆರೆಕಟ್ಟೆಗಳ ಅಭಿವೃದ್ಧಿ ದೇವಾಲಯಗಳ ಅಭಿವೃದ್ಧಿ ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಆರ್ಥಿಕ ನೆರವು ಆರೋಗ್ಯ ತಪಾಸಣಾ ಶಿಬಿರಗಳು ಶಾಲೆಗಳಿಗೆ ಅಗತ್ಯ ಪೀಠ ಪ್ರಕರಣ ಶಿಕ್ಷಕರ ನೇಮಕ ಮೊದಲಾದವನ್ನು ಮಾಡುತ್ತಾ ಬರುತ್ತಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕ ಶಿವಣ್ಣ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಜನಪದ ಕಾರ್ಯಗಳನ್ನು ಮಾಡುತ್ತಿದೆ. ಇಂದು ನಮ್ಮ ಮಕ್ಕಳಲ್ಲಿ ಸಹ ಪರಿಸರ ಬಗ್ಗೆ ಒಂದು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡಿರುವುದು ನಿಜಕ್ಕೂ ಸಂತೋಷ ತಂದಿದೆ ಎಂದರು.

ಧರ್ಮಸ್ಥಳ ಶ್ರೀ ಕ್ಷೇತ್ರದ ಒಕ್ಕೂಟದ ಅಧ್ಯಕ್ಷೆ ಮಹಾಲಕ್ಷ್ಮಿ, ಮೇಲ್ವಿಚಾರಕಿ ಸುನೀತ, ಗ್ರಾಮಸ್ಥರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!