ರಾಷ್ಟ್ರ ವಿಕಾಸದ ಮೂಲಶಕ್ತಿ ಮಾನವ ಸಂಪನ್ಮೂಲ

KannadaprabhaNewsNetwork |  
Published : Feb 04, 2026, 02:45 AM IST
ತಿಮ್ಮಾಪೂರ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಜ್ಞಾನಜ್ಯೋತಿ ಉತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಆಳವಾದ ಜ್ಞಾನಾರ್ಜನೆಯೊಂದಿಗೆ ಶ್ರೇಷ್ಠ ಕೌಶಲ, ಕ್ರಿಯಾಶೀಲತೆ, ಸಮಯಪ್ರಜ್ಞೆ ಹಾಗೂ ಮೇರು ಮೌಲ್ಯ ರೂಢಿಸಿಕೊಂಡು ದೇಶ ಬಯಸುವ ಉತ್ಕೃಷ್ಟ ಮಾನವಸಂಪನ್ಮೂಲವಾಗಿ ಬೆಳೆಯಬೇಕು.

ಧಾರವಾಡ:

ರಾಷ್ಟ್ರವಿಕಾಸದ ಮೂಲಶಕ್ತಿ ಮಾನವ ಸಂಪನ್ಮೂಲವೇ ಆಗಿದೆ ಎಂದು ಧಾರವಾಡ ಗ್ರಾಮೀಣ ತಾಲೂಕು ಬಿಇಒ ರಾಮಕೃಷ್ಣ ಸದಲಗಿ ನುಡಿದರು.

ತಾಲೂಕಿನ ತಿಮ್ಮಾಪೂರ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಜ್ಞಾನಜ್ಯೋತಿ ವಿದ್ಯಾಲಯದ ಆಂಗ್ಲಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವತಿಯಿಂದ ಸಮೀಪದ ಠಾಕೂರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜ್ಞಾನಜ್ಯೋತಿ ಉತ್ಸವದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆಳವಾದ ಜ್ಞಾನಾರ್ಜನೆಯೊಂದಿಗೆ ಶ್ರೇಷ್ಠ ಕೌಶಲ, ಕ್ರಿಯಾಶೀಲತೆ, ಸಮಯಪ್ರಜ್ಞೆ ಹಾಗೂ ಮೇರು ಮೌಲ್ಯ ರೂಢಿಸಿಕೊಂಡು ದೇಶ ಬಯಸುವ ಉತ್ಕೃಷ್ಟ ಮಾನವಸಂಪನ್ಮೂಲವಾಗಿ ಬೆಳೆಯಬೇಕು ಎಂದರು.

ವಿದ್ಯಾರ್ಥಿಗಳು ನಿರಂತರ ಕಲಿಕಾ ಮನೋಭಾವ, ಸೃಜನಶೀಲತೆ, ಸಂಶೋಧನಾ ದೃಷ್ಟಿ, ನಾಯಕತ್ವ, ಪ್ರಾಮಾಣಿಕತೆ, ಹೊಣೆಗಾರಿಕೆ, ಸಹಾನುಭೂತಿ, ಸಹನಶೀಲತೆ, ಆತ್ಮವಿಶ್ವಾಸ ಬೆಳೆಸಿಕೊಂಡಾಗ ಸಶಕ್ತ ಮಾನವಸಂಪನ್ಮೂಲವಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು-ಪೋಷಕರು ವ್ಯಾಪಕ ಕಾಳಜಿವಹಿಸಬೇಕೆಂದು ಸಲಹೆ ನೀಡಿದರು.

ನಿವೃತ್ತ ಶಿಕ್ಷಕ ಗುರುಮೂರ್ತಿ ಯರಗಂಬಳಿಮಠ ಮಾತನಾಡಿ, ವಿದ್ಯಾರ್ಥಿಗಳ ಜೀವನ ಒಂದು ತಪಸ್ಸಿದ್ದಂತೆ. ಅಲ್ಲಿ ಪರಿಶ್ರಮದಿಂದ ಗಳಿಸಿದ ಜ್ಞಾನ, ಅನುಭವ, ನಿರಂತರ ಶಿಸ್ತು, ವ್ಯಾಸಂಗದ ಬದ್ಧತೆ ಇದ್ದಾಗ ನಿರ್ದಿಷ್ಟ ಗುರಿ ಸಾಧಿಸಿ ಸಂಭ್ರಮಿಸಲು ಸಾಧ್ಯವಾಗುತ್ತದೆ ಎಂದರು.

ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ, ಕವಿವಿ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಚ್.ಎಸ್. ರಮಣೆ, ಕಾನೂನು ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಮಂಜಣ್ಣ ಜಂಗವಾಡ, ಶಿವಾನಂದ ಜವಳಿ ಅತಿಥಿಗಳಾಗಿದ್ದರು. ವಿದ್ಯಾಚೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಂಗಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸೆರೂನ್ ಲಗಳಿ ಸ್ವಾಗತಿಸಿದರು. ಮುಖ್ಯಾಧ್ಯಾಪಕಿ ಬಿಂದು ಲಗಳಿ ನಿರೂಪಿಸಿದರು. ಆಡಳಿತ ಮಂಡಳಿ ನಿರ್ದೇಶಕ ಮೃತ್ಯುಂಜಯ ಹಿರೇಮಠ ವಂದಿಸಿದರು. ಉತ್ಸವದಲ್ಲಿ ಪ್ರದರ್ಶನಗೊಂಡ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌