ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಲೂಕ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಮಾತನಾಡಿ, ಮನುಷ್ಯ ಹುಟ್ಟಿನಿಂದ ಕೊನೆವರೆಗೆ ನನ್ನದೇ ಆದ ಹಕ್ಕುಗಳನ್ನು ಹೊಂದಿದ್ದಾನೆ. ಆ ಹಕ್ಕುಗಳನ್ನು ಕಸಿದುಕೊಳ್ಳುವುದು ಅಪರಾಧವಾಗಿದೆ. ಸಮುದಾಯ ಮತ್ತು ಪ್ರತಿಯೊಬ್ಬರೂ ಮಾನವ ಹಕ್ಕುಗಳ ರಕ್ಷಣೆಗೆ ಸರ್ಕಾರದಿಂದ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಕಪನಿ ನಂಜೇಶ್ವರ ಮಾತನಾಡಿ, ಶಾಂತಿ, ಸೌಹಾರ್ದ ಮತ್ತು ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತವಾಗಿ ಜೀವನ ನಡೆಸಲು ಮಾನವ ಹಕ್ಕುಗಳನ್ನು ಜಾರಿಗೆ ತರಲಾಗಿದೆ. ಇವುಗಳು ಉಲ್ಲಂಘನೆಯಾದಾಗ ಸಮಸ್ಯೆ ಪರಿಹರಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.ಮಾನವ ಹಕ್ಕುಗಳ ಮಹತ್ವ ಕುರಿತು ಆರಕ್ಷಕ ಉಪನಿರೀಕ್ಷಕ ಮಂಜುನಾಥ್, ಉಚಿತ ಕಾನೂನು ನೆರವು ಸಲಹೆಗಾರ ವೆಂಕಟೇಶ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗ್ರೇಡ್ ಟು ತಹಸೀಲ್ದಾರ್ ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರು. ತಾಲೂಕ ಕಚೇರಿ ಶಿರಸ್ತೇದಾರ್ ಲಕ್ಷ್ಮಿನರಸಿಂಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.ಸರ್ಕಾರಿ ಜಾಗ ಒತ್ತುವರಿ: ತೆರವು ಕಾರ್ಯಾಚರಣೆ
ಹಲಗೂರು:ಸಮೀಪದ ಬಾಣಸಮುದ್ರ ಗ್ರಾಮದಲ್ಲಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಮಂಗಳವಾರ ತೆರವುಗೊಳಿಸಿದರು.ಬಾಣಸಮುದ್ರ ಗ್ರಾಮದ ಸರ್ವೇ ನಂ.223/ಪಿ 1ರಲ್ಲಿ 04 ಗುಂಟೆ ಜಮೀನನ್ನು ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಿಸುವ ಉದ್ದೇಶಕ್ಕಾಗಿ ಮಂಜೂರಾಗಿದ್ದು, ಸದರಿ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದರು. ಈ ಜಾಗವನ್ನು ಅಳತೆ ಮಾಡಿ ಗಡಿ ಗುರುತಿಸುವ ಕಾರ್ಯ ನಡೆಯಿತು.
ಈ ಸಂಬಂಧ ಉನ್ನತ ಅಧಿಕಾರಿಗಳ ಅದೇಶದ ಮೇರೆಗೆ ಕಸಬಾ 3ನೇ ವೃತ್ತದ ರಾಜಸ್ವ ನಿರೀಕ್ಷಕ ರವಿಕುಮಾರ್ ನೇತೃತ್ವದಲ್ಲಿ ಭೂಮಾಪನ ಇಲಾಖೆ ತಾಲೂಕು ಸರ್ವೇಯರ್ ಎಂ.ಎಸ್.ಬಿರೇಶ್ ಒತ್ತುವರಿ ಜಾಗ ಗುರುತಿಸಿದರು. ಎಎಸ್ಐ ಶಿವಣ್ಣ ಮತ್ತು ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ಸರ್ಕಾರಿ ಜಾಗವನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವುಗೊಳಿಸಲಾಯಿತು.ತೆರವು ಕಾರ್ಯಾಚರಣೆ ನಂತರ ರಾಜಸ್ವ ನಿರೀಕ್ಷಕ ರವಿಕುಮಾರ್ ರವರು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಮಂಜುನಾಥ್ ಅವರಿಗೆ ಸ್ಥಳವನ್ನು ಹಸ್ತಾಂತರಿಸಿದರು.
ಈ ವೇಳೆ ರಾಜಸ್ವ ನಿರೀಕ್ಷಕ ರವಿಕುಮಾರ್, ಕಸಬಾ 2 ನೇ ವೃತ್ತದ ಗ್ರಾಮ ಲೆಕ್ಕಿಗರಾದ ಭಾಸ್ಕರ್, ಎಎಸ್ಐ ಶಿವಣ್ಣ, ಸಿಬ್ಬಂದಿ ಮಹದೇವಸ್ವಾಮಿ, ಗೀತಾ ಹಂಚಿನಾಳ ಸೇರಿದಂತೆ ಗ್ರಾಮದ ಹಲವರು ಭಾಗವಹಿಸಿದ್ದರು.