ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆಗಳ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಮಾನವ ಸಾಗಾಣಿಕೆಯು ಒಂದು ಘೋರ ಅಪರಾಧವಾಗಿದೆ. ಪ್ರಪಂಚದಲ್ಲೆಡೆ ಅದರ ಪ್ರಭಾವವಿದ್ದು, ಅಸಮಾನತೆ. ತಾರತಮ್ಯತೆ ಮತ್ತು ದುರ್ಬಲತೆಗೆ ಕಾರಣವಾಗಿದೆ. ಸಾಮಾನ್ಯ ಜನರ ಆಸೆ-ಆಕಾಂಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು.ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ, 200ಕ್ಕೂ ಹೆಚ್ಚಿನ ಫೋಕ್ಸೋ ಮತ್ತು 50ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ ಎಂದ ಅವರು, ಈ ಎಲ್ಲಾ ಅನಿಷ್ಠಗಳ ನಿಯಂತ್ರಣಕ್ಕಾಗಿ 15 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪ್ರಕರಣವನ್ನು ದಾಖಲಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧವೂ ಕಾನೂನಿನಲ್ಲಿ ಕ್ರಮಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಡಿವೈಎಸ್ಪಿ ಬಾಬು ಅಂಜನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಬಾಲ ನ್ಯಾಯ ಮಂಡಳಿ ಅಧ್ಯಕ್ಷೆ ರೇಖಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್, ಮಂಜುನಾಥಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಹಾಜರಿದ್ದರು.