ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶನಿವಾರ ನಗರದ ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿವೇಕಾನಂದ ಜಯಂತಿ - ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಭಾರತೀಯ ಚಿಂತನೆ ಮತ್ತು ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದ, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ನೇತ್ರಜ್ಯೋತಿ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಗೌರಿ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ., ಖಜಾಂಚಿ ರಮಾದೇವಿ, ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಧ್ಯಾಪಕ ಶಹನಾಜ್, ಕಾಲೇಜಿನ ಸಂಯೋಜಕ ಸಚಿನ್ ಶೇಟ್ ಮತ್ತು ಮಾಧವ ಪೂಜಾರಿ, ರೆಡ್ ಕ್ರಾಸ್ ಸ್ವಯಂಸೇವಕಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ರಕ್ಷಾ ಸ್ವಾಗತಿಸಿ, ಸ್ವಾತಿ ವಂದಿಸಿದರು.