ಪುನೀತ್ ಸ್ಮರಣೆಯಲ್ಲಿ ಮಾನವೀಯ ಸೇವೆ: 25‌ ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ

KannadaprabhaNewsNetwork |  
Published : Oct 30, 2026, 02:45 AM IST
ಕುಷ್ಟಗಿ ಪಟ್ಟಣದ ಮಲ್ಲಿಕಾರ್ಜುನ ಭವನದಲ್ಲಿ ಇನ್ನರ್‌ ವೀಲ್‌ ಕ್ಲಬ್‌ ಸಹಯೋಗದಲ್ಲಿ ನಟ ಡಾ. ಪುನೀತ್ ರಾಜಕುಮಾರ್ 5ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ 25 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರವನ್ನು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಉದ್ಘಾಟಿಸಿದರು. | Kannada Prabha

ಸಾರಾಂಶ

ಆರ್ಥಿಕ ಸಂಕಷ್ಟದಿಂದ ಕಣ್ಣಿನ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಬಡವರ ಬಾಳಿಗೆ ಬೆಳಕು ನೀಡುವ ಉದ್ದೇಶದಿಂದ ನಟ ಡಾ. ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಕುಷ್ಟಗಿ ಪಟ್ಟಣದ ಮಲ್ಲಿಕಾರ್ಜುನ ಭವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ 25 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.

ಕುಷ್ಟಗಿ: ಆರ್ಥಿಕ ಸಂಕಷ್ಟದಿಂದ ಕಣ್ಣಿನ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಬಡವರ ಬಾಳಿಗೆ ಬೆಳಕು ನೀಡುವ ಉದ್ದೇಶದಿಂದ ನಟ ಡಾ. ಪುನೀತ್ ರಾಜಕುಮಾರ್ ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ಮಲ್ಲಿಕಾರ್ಜುನ ಭವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ 25 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.

ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಚಿತವಾಗಿ ದೊರೆಯುವ ಯಾವುದೇ ಸೌಲಭ್ಯಗಳು ಆರ್ಥಿಕವಾಗಿ ಅತ್ಯಂತ ಹಿಂದುಳಿದವರಿಗೆ ತಲುಪಿದಾಗ ಮಾತ್ರ ಸಾರ್ಥಕವಾಗುತ್ತವೆ. ಇಲ್ಲದಿದ್ದರೆ ಅಂತಹ ಸೌಲಭ್ಯಗಳು ವ್ಯರ್ಥವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಇನ್ನರ್ ವೀಲ್ ಕ್ಲಬ್‌ನ ಈ ಸೇವೆ ಪ್ರಶಂಸೆಗೆ ಪಾತ್ರವಾಗಿದೆ. ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ ಇಂತಹ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಿದರೆ ಅಂಧತ್ವ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಇತರರಿಗೆ ಪ್ರೇರಣೆಯಾಗಲಿ: ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಸಹಕಾರ ನೀಡಿದ ದಾನಿ ವಂದನಾ ಗೋಗಿ ಅವರ ಸೇವೆಯನ್ನು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಶ್ಲಾಘಿಸಿ, ಇಂತಹ ಸಮಾಜಮುಖಿ ಕಾರ್ಯಗಳು ಇತರರಿಗೂ ಪ್ರೇರಣೆಯಾಗಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ವಂದನಾ ಗೋಗಿ ಅವರನ್ನು ಗೌರವಿಸಲಾಯಿತು.

ಕಣ್ಣಿನ ಆಸ್ಪತ್ರೆಯ ವೈದ್ಯ ಡಾ. ಸುಶೀಲ್ ಕಾಖಂಡಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇನ್ನರ್‌ ವೀಲ್‌ ಕ್ಲಬ್‌ ಅಧ್ಯಕ್ಷೆ ಗೌರಮ್ಮ ಕುಡತಿನಿ, ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ, ಸುದೀಪ್ತಾ ಕಾಖಂಡಕಿ, ಡಾ. ಪಾರ್ವತಿ ಪಳೋಟಿ, ವಂದನಾ ಗೋಗಿ, ಶ್ರೀದೇವಿ ಮಸ್ಕಿಮಠ, ಪ್ರಭಾ ಬಂಗಾರಶೆಟ್ಟರ್, ಸುಮಾ ಬ್ಯಾಳಿ, ಶಾರದಾ ಕಟ್ಟಿಮನಿ, ಗಿರಿಜಾ ಮಾಲಿಪಾಟೀಲ್ ಇದ್ದರು. ಶಿಬಿರದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಪಡೆದ ಫಲಾನುಭವಿಗಳಿಗೆ ಡಿಸಿ ಡಾ. ಸುರೇಶ ಇಟ್ನಾಳ ಕನ್ನಡಕ ವಿತರಿಸಿದರು. ಗೌರಮ್ಮ ಕುಡತನಿ ಸ್ವಾಗತಿಸಿದರು. ಶಾರದಾ ಶೆಟ್ಟರ್ ಹಾಗೂ ಡಾ. ಸೌಮ್ಯಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕೈಜೋಡಿಸಿ:‌ ಆರ್ಥಿಕ ಸಂಕಷ್ಟದಿಂದ ಕಣ್ಣಿನ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಬಡವರಿಗೆ ನೆರವಾಗುವ ಉದ್ದೇಶದಿಂದ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಸಹಕಾರ ನೀಡಿದ್ದೇನೆ. ಬಡವರ ಬದುಕಿನಲ್ಲಿ ಬೆಳಕು ಮೂಡಿಸುವುದು ಸಂತೋಷದ ಸಂಗತಿ. ಸಹಾಯ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ದಾನಿ ವಂದನಾ ಗೋಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು