ಬಿಳಿಗಿರಿ ರಂಗನ ಬೆಟ್ಟದ ಬಂಗ್ಲೆ ಪೋಡಿನಲ್ಲಿ ಜೆಎಸ್ಎಸ್ ಮಹಿಳಾ ಪಿಯು ಕಾಲೇಜಿನ ಎನ್.ಎಸ್.ಎಸ್ ಶಿಬಿರ ಉದ್ಘಾಟನೆ ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ವತಿಯಿಂದ ಬಿಳಿಗಿರಿ ರಂಗನ ಬೆಟ್ಟದ ಬಂಗ್ಲೆ ಪೊಡುವಿನಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ತಾವು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿ ಎನ್.ಎಸ್.ಎಸ್ ನಂತಹ ಸಮಾಜಸೇವಾ ಮಾರ್ಗಗಳನ್ನು ಹೇಗೆ ಸದುಪಯೋಗಪಡಿಸಿಕೊಳ್ಳುತ್ತಿದ್ದೆವು ಎಂಬುದನ್ನು ನೆನಪಿಸಿಕೊಂಡ ಅವರು, "ನಾನು ಮೊದಲ ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಮಾಜಿ ಸಚಿವ ದಿವಂಗತ ಎಚ್.ಎಸ್. ಮಹಾದೇವ ಪ್ರಸಾದ್ ಅವರೊಂದಿಗೆ ಜರ್ಮನಿ ಪ್ರವಾಸ ಕೈಗೊಂಡಿದ್ದೆ. ಅಲ್ಲಿನ ಜನರು ಸ್ವಚ್ಛತೆಗೆ ನೀಡುವ ಮಹತ್ವ ಹಾಗೂ ಅವರ ಆಹಾರ ಪದ್ಧತಿ ನಮಗೆ ದೊಡ್ಡ ಮಾದರಿ, " ಎಂದು ಹೇಳಿದರು.ಅಮೇರಿಕ ಸೇರಿ ವಿವಿಧ ದೇಶಗಳಲ್ಲಿ ನೆಲೆಸಿರುವ ವಲಸಿಗರು ತಾವು ''''''''''''''''ಏಷ್ಯಾ ಖಂಡದವರು'''''''''''''''' ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾ ಒಟ್ಟಾಗಿ ಬಾಳುತ್ತಾರೆ. ಅದೇ ರೀತಿ ನಾವೂ ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದರು.
ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ ಮಾತನಾಡಿ, ಹೆಣ್ಣುಮಕ್ಕಳು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ರಾಜಕೀಯ ಕ್ಷೇತ್ರದಲ್ಲೂ ಮುಂಚೂಣಿಗೆ ಬರಬೇಕು ಎಂದರು. ಕಾಡಿನ ನಿವಾಸಿಯಾದ ನನ್ನಂತಹ ಗಿರಿಜನ ಮಹಿಳೆಯನ್ನು ಗುರುತಿಸಿ ಅವಕಾಶ ನೀಡಿದ ಮುಖಂಡರನ್ನು ನಾನು ಸದಾ ಸ್ಮರಿಸುತ್ತೇನೆ. ನಾಡಿನ ಜನತೆ ಕಾಡು, ಕಾಡಿನ ಜೀವಿಗಳು ಹಾಗೂ ಅಲ್ಲಿನ ಜನರ ಹಕ್ಕುಗಳನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು ಎಂದು ತಿಳಿಸಿದರು.ವಿಶ್ವ ಶಾಂತಿನಿಕೇತನ ಆಶ್ರಮದ ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಆಶೀರ್ವಚನ ನೀಡಿ, ಶಿಬಿರಾರ್ಥಿಗಳು ಶಿಸ್ತು ಹಾಗೂ ಸೇವಾಮನೋಭಾವವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪ್ರೇರೇಪಿಸಿದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಗಿರೀಶ್ ಹರವೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಭೂಮಿಕಾ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಎಲ್ಲರನ್ನೂ ಸ್ವಾಗತಿಸಿದರು. ಮಿಂಚು ಕಾರ್ಯಕ್ರಮ ನಿರೂಪಿಸಿದರೆ, ಸರಸ್ವತಿ ವಂದನಾರ್ಪಣೆ ಮಾಡಿದರು.
29ಸಿಎಚ್ಎನ್16