ಅಂಜನಾದ್ರಿಗೆ ರೋಪ್ ವೇ ನಿರ್ಮಾಣಕ್ಕೆ 100 ಕೋಟಿ ರುಪಾಯಿ ಅನುದಾನ: ಮುನವಳ್ಳಿ ಸಂತಸ

KannadaprabhaNewsNetwork |  
Published : Feb 24, 2024, 02:33 AM IST
ಅಂಜನಾದ್ರಿಗೆ ರೋಪ್ ವೇ ನಿರ್ಮಾಣಕ್ಕೆ 100 ಕೋಟಿ ರು ಅನುದಾನಃ ಮುನವಳ್ಳಿ ಸಂತಸ | Kannada Prabha

ಸಾರಾಂಶ

ರೋಪ್ ವೇ ನಿರ್ಮಾಣದಿಂದ ವೃದ್ಧರು ಸೇರಿದಂತೆ ಮಕ್ಕಳಿಗೂ ಅನುಕೂಲವಾಗುತ್ತದೆ. ಶೀಘ್ರದಲ್ಲಿ ಮೇಲಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೋಪ್ ವೇ ನಿರ್ಮಾಣದ ರೂಪುರೇಷಗಳನ್ನು ಸಿದ್ಧಪಡಿಸುತ್ತಾರೆ.

ಗಂಗಾವತಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ₹100 ಕೋಟಿ ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಸಂತಸ ವ್ಯಕ್ತಪಡಿಸಿದರು.

ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಅಭಿವೃದ್ಧಿಗೆ ₹120 ಕೋಟಿ ಅನುದಾನ ನೀಡಿದ ಫಲವಾಗಿ ಈಗ ಕಾಮಗಾರಿ ಪ್ರಾರಂಭವಾಗಿದೆ. ಈಗ ಕೇಂದ್ರ ಸಚಿವರು ₹100 ಕೋಟಿ ಅನುದಾನವನ್ನು ರೋಪ್ ವೇ ನಿರ್ಮಾಣಕ್ಕೆ ನೀಡುತ್ತಿರುವುದು ಇಡೀ ಗಂಗಾವತಿ ಕ್ಷೇತ್ರ ಅಲ್ಲದೇ ಹನುಮನ ಭಕ್ತರಿಗೂ ಸಂತಸ ತಂದಿದೆ ಎಂದರು.ರೋಪ್ ವೇ ನಿರ್ಮಾಣದಿಂದ ವೃದ್ಧರು ಸೇರಿದಂತೆ ಮಕ್ಕಳಿಗೂ ಅನುಕೂಲವಾಗುತ್ತದೆ. ಶೀಘ್ರದಲ್ಲಿ ಮೇಲಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೋಪ್ ವೇ ನಿರ್ಮಾಣದ ರೂಪುರೇಷಗಳನ್ನು ಸಿದ್ಧಪಡಿಸುತ್ತಾರೆ. ಇದಕ್ಕೆ ಸಂಸದರ ಪ್ರಯತ್ನವೂ ಕಾರಣವಾಗಿದೆ ಎಂದರು.ರೋಪ್ ವೇ ನಿರ್ಮಾಣ ಕಾಮಗಾರಿಯ ಜವಾಬ್ದಾರಿಯನ್ನು ಎನ್‌ಎಚ್ಎಲ್‌ಎಂ ಕಂಪನಿಗೆ ನೀಡಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗುತ್ತದೆ. ಅಂಜನಾದ್ರಿ ಅಭಿವೃದ್ಧಿಯತ್ತ ಸಾಗಿದೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೆಲೋಜಿ ಸಂತೋಷ, ಚೆನ್ನಪ್ಪ ಮಳಗಿ, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪನಾಯಕ, ಕಾಶಿನಾಥ ಚಿತ್ರಗಾರ, ನಗರಸಭಾ ಸದಸ್ಯ ವಾಸುದೇವ ನವಲಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು