ಹನಿಯೂರು ಲ್ಯಾಪ್‌ಟಾಪ್‌ನಲ್ಲಿನೂರಾರು ಅಶ್ಲೀಲ ದೃಶ್ಯ ಲಭ್ಯ

KannadaprabhaNewsNetwork |  
Published : May 04, 2026, 04:00 AM IST
ಹನಿಯೂರು ಚಂದ್ರೇಗೌಡ | Kannada Prabha

ಸಾರಾಂಶ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದ ಆರೋಪಿ ಹನಿಯೂರು ಚಂದ್ರೇಗೌಡನ ಲ್ಯಾಪ್‌ಟಾಪ್‌ನಲ್ಲಿ ಹಲವು ಮಹಿಳೆಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದ ಆರೋಪಿ ಹನಿಯೂರು ಚಂದ್ರೇಗೌಡನ ಲ್ಯಾಪ್‌ಟಾಪ್‌ನಲ್ಲಿ ಹಲವು ಮಹಿಳೆಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿದೆ.

ಸಾಮಾಜಿಕ ತಾಲತಾಣದಲ್ಲಿ ಮಹಿಳೆಯರಿಗೆ ಗಾಳ ಹಾಕಿ ಬಳಿಕ ಅವರನ್ನು ಲೈಂಗಿಕವಾಗಿ ಬಳಸಿ ಅದರ ವಿಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ಚನ್ನಪಟ್ಟಣ ತಾಲೂಕಿನ ಹನಿಯೂರು ಚಂದ್ರೇಗೌಡನನ್ನು ಆರ್‌.ಆರ್‌.ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ನಡೆಸಿದಾಗ ಆತನ ಮೊಬೈಲ್‌ನಲ್ಲಿ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋಗಳು ಪತ್ತೆಯಾಗಿತ್ತು. ಆರೋಪಿಯನ್ನು ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾಗ ಆತನ ಲ್ಯಾಪ್‌ಟಾಪ್‌ನಲ್ಲಿ ಸುಮಾರು ನೂರಾರು ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ ತನ್ನನ್ನು ಪರಿಚಯಿಸಿಕೊಳ್ಳುತ್ತಿದ್ದ. ಕೆಲವರಿಗೆ ತಾನು ಸೀರಿಯಲ್ ನಟ ಎಂದರೆ, ಇನ್ನು ಕೆಲವರಿಗೆ ಪ್ರೊಫೆಸರ್ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದ. 43 ವರ್ಷದ ಮಹಿಳೆಯೊಬ್ಬರ ಜತೆ ಸಂಬಂಧದಲ್ಲಿದ್ದ ಈತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ಮಹಿಳೆ ತನ್ನ ಪತಿಯಿಂದ ದೂರವಾಗಿದ್ದನ್ನು ಬಂಡವಾಳ ಮಾಡಿಕೊಂಡಿದ್ದ ಆರೋಪಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಆರೋಪಿ ಪೊಲೀಸ್‌ ಅಧಿಕಾರಿಯ ನಕಲಿ ಗುರುತಿನ ಚೀಟಿಯನ್ನು ಇಟ್ಟುಕೊಂಡು ಕೆಲ ಅಧಿಕಾರಿಗಳಿಗೆ ಬೆದರಿಸುತ್ತಿದ್ದ.

ಆರೋಪಿ ಚಂದ್ರೇಗೌಡನ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ನಲ್ಲಿ ಹಲವು ಮಹಿಳೆಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತ ಮಹಿಳೆಯರನ್ನು ಸಂಪರ್ಕಿಸಲು ಮುಂದಾಗಿದ್ದಾರೆ. ಆದರೆ ಆ ಮಹಿಳೆಯರು ಮರ್ಯಾದೆಗೆ ಅಂಜಿ ದೂರು ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಸ್ಟಡಿ ಅವಧಿ ಇಂದಿಗೆ ಅಂತ್ಯ

ಆರೋಪಿಯ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ ಅನ್ನು ಜಪ್ತಿ ಮಾಡಿರುವ ಪೊಲೀಸರು ಅದನ್ನು ಎಫ್‌ಎಸ್‌ಎಲ್‌ ರವಾನಿಸಿದ್ದಾರೆ. ಆರೋಪಿಯ ಪೊಲೀಸ್‌ ಕಸ್ಟಡಿಗೆ ಅವಧಿ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಆರೋಪಿಯನ್ನು ಕೋರ್ಟ್‌ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾರ್‌ಧಾಮ್‌ ಯಾತ್ರೆ ಹೆಸರಲ್ಲಿ26 ಮಂದಿಗೆ ₹15 ಲಕ್ಷ ಟೋಪಿ
ವಿದ್ಯುತ್‌, ವಾಣಿಜ್ಯ ಸಿಲಿಂಡರ್‌ಬೆನ್ನಲ್ಲೇ ತರಕಾರಿಯೂ ದುಬಾರಿ