ರಡ್ಡೇರನಾಗನೂರ ಗ್ರಾಮದಲ್ಲಿ ಹೆಂಡತಿಯಿಂದಲೇ ಗಂಡನ ಕೊಲೆ

KannadaprabhaNewsNetwork |  
Published : May 22, 2026, 02:15 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ಗ್ರಾಮದ ನಿವಾಸಿ ವಿಶ್ವನಾಥ ಹಾದಿಮನಿ(29) ಕೊಲೆಯಾದ ದುರ್ದೈವಿ. ವಿಶ್ವನಾಥನ ಪತ್ನಿ ಕವಿತಾ ಹಾದಿಮನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನರಗುಂದ: ತಾಲೂಕಿನ ರಡ್ಡೇರನಾಗನೂರ ಗ್ರಾಮದಲ್ಲಿ ಪತಿಯನ್ನೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ.ಗ್ರಾಮದ ನಿವಾಸಿ ವಿಶ್ವನಾಥ ಹಾದಿಮನಿ(29) ಕೊಲೆಯಾದ ದುರ್ದೈವಿ. ವಿಶ್ವನಾಥನ ಪತ್ನಿ ಕವಿತಾ ಹಾದಿಮನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇವರು 2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ದಿನದಿಂದಲೇ ದಾಂಪತ್ಯ ಜೀವನದಲ್ಲಿ ಜಗಳ ನಡೆಯುತ್ತೆಂದು ತಿಳಿದುಬಂದಿದೆ. ಮೃತ ವಿಶ್ವನಾಥ ಡಿಪ್ಲೊಮಾ ಎಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದರೂ ಕೃಷಿ ಕಾಯಕ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೌಟುಂಬಿಕ ಕಲಹವೇ ಕೊಲೆಗೆ ಕಾರಣವೆಂದು ಶಂಕಿಸಲಾಗಿದೆ.ಈ ಕುರಿತು ಮೃತನ ತಾಯಿ ಗೌರವ್ವ ನರಗುಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಪಿಐ ಸತ್ಯಪ್ಪ ಮಾಳಗೊಂಡ ಆರೋಪಿ ಕವಿತಾಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಮಹಿಳಾ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಗದಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಮಹಿಳಾ ಪಪೂ ವಸತಿರಹಿತ ಕಾಲೇಜನ್ನು ಪ್ರಾರಂಭಿಸಲಾಗುತ್ತಿದ್ದು, ಕಾಲೇಜಿಗೆ 2025- 26ನೇ ಸಾಲಿಗೆ ಕಲಾ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ಪ್ರವೇಶಕ್ಕೆ ಪ್ರತಿ ವಿಭಾಗಕ್ಕೆ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಪಜಾ, ಪಪಂ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಹಾಗೂ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ವಿಜ್ಞಾನ ವಿಭಾಗ, ಕಲಾ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ ಶೇ. 25ರಷ್ಟು ಇತರೆ ವರ್ಗದವರಿಗೆ ಪ್ರವೇಶ ಮೀಸಲಿರಿಸಿದೆ. 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಜಿಲ್ಲಾ ನ್ಯಾಯಾಲಯದ ಎದುರುಗಡೆ ಸಂಪರ್ಕಿಸಬಹುದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೃದ್ಯ ಪುಸ್ತಕ ಪ್ರೀತಿ ಬೆಳೆಸಿ ಪುಸ್ತಕ ಸಂಸ್ಕೃತಿ ಬೆಳೆಸಿ ಉತ್ತೇಜಿಸುವ ಅಗತ್ಯವಿದೆ
ಬಂಗಾರಪ್ಪ ನಗರ, ಗಾಂಧಿನಗರ ನಿವಾಸಿಗಳ ಮನೆಗಳ ತೆರವಿಗೆ ತಡೆ