ಪತಿಯಿಂದ ಪತ್ನಿಯ ಕೊಲೆ: ಆರೋಪಿ ಬಂಧನ

KannadaprabhaNewsNetwork |  
Published : Nov 05, 2025, 03:15 AM IST
ತಡ | Kannada Prabha

ಸಾರಾಂಶ

ವಿಪರೀತ ಪಾನಮತ್ತನಾಗಿ ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ವಿಪರೀತ ಪಾನಮತ್ತನಾಗಿ ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಸುಂಟಿಕೊಪ್ಪ ವ್ಯಾಪ್ತಿಯ ಕೊಡಗರಹಳ್ಳಿ ಗ್ರಾಮದ ಅಂದಗೋವೆ ಖಾಸಗಿ ಕಾಫಿ ತೋಟವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಪತಿ ಮುತ್ತ ಭಾನುವಾರ ರಾತ್ರಿ ವಿಪರೀತ ಮದ್ಯ ಸೇವಿಸಿ ಪತ್ನಿ ಲತಾ (45) ಎಂಬಾಕೆಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗದು ಪತ್ನಿಯ ತಲೆಗೆ ಬಲವಾಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದು ಲತಾಳನ್ನು ಸ್ಥಳದಲ್ಲೇ ಹತ್ಯೆಗೈದಿದ್ದಾನೆ.

ಸೋಮವಾರ ಸಂಜೆ ಲತಾಳ ಅಕ್ಕ ವಳ್ಳಿಯಮ್ಮ ಎಂಬಾಕೆ ದೂರು ನೀಡಿದ ಮೇರೆ ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಮುತ್ತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಡಿಷನಲ್ ಎಸ್ ಪಿ ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ದಿನೇಶ್‌ ಕುಮಾರ್, ಸುಂಟಿಕೊಪ್ಪ ಮೋಹನ್‌ರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

--------------------------------------------------------------------

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಸೋಮವಾರಪೇಟೆ: ಅರೆಸ್ಟ್ ವಾರಂಟ್ ನೀಡಲು ಆರೋಪಿಯ ಮನೆಗೆ ಪೊಲೀಸರು ತೆರಳಿದ ಸಂದರ್ಭ, ಆರೋಪಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಮೀಪದ ಗಾಂಧಿನಗರದಲ್ಲಿ ನಡೆದಿದೆ.ಗಾಂಧಿನಗರ ನಿವಾಸಿ ಸಂಜಯ್ ಎಂಬಾತ ವಿವಿಧ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಅರೆಸ್ಟ್ ವಾರಂಟ್ ನೀಡಲಾಗಿತ್ತು. ಇದನ್ನು ಆರೋಪಿಗೆ ನೀಡಿ ವಶಕ್ಕೆ ಪಡೆಯಲು ಮಂಗಳವಾರ ಬೆಳಿಗ್ಗೆ ಸೋಮವಾರಪೇಟೆ ಪೊಲೀಸ್ ಸಿಬ್ಬಂದಿ ಮಲ್ಲೇಶ್ ಹಾಗೂ ಸಾಜನ್ ಅವರು ತೆರಳಿದ್ದು, ಈ ಸಂದರ್ಭ ಆರೋಪಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.ತಕ್ಷಣ ಪೊಲೀಸರು ಬೆಂಕಿ ನಂದಿಸಲು ಮುಂದಾಗಿದ್ದು, ಈ ಸಂದರ್ಭ ಈರ್ವರು ಪೊಲೀಸರ ಕೈಗಳಿಗೂ ಸುಟ್ಟಗಾಯಗಳಾಗಿವೆ. ಇತ್ತ ಸಂಜಯ್ ತೀವ್ರಗಾಯಗೊಂಡಿದ್ದು, ಮೂವರಿಗೂ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸಲಾಗಿದೆ.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ