ಪತ್ನಿಯನ್ನು 10 ಬಾರಿ ಇರಿದು ಕೊಲೆಗೈದ ಪತಿ

KannadaprabhaNewsNetwork |  
Published : May 29, 2025, 01:09 AM IST

ಸಾರಾಂಶ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಮನಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಮನಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಗ್ರಾಮದಲ್ಲಿ ಬುಧವಾರ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ, ಅವಿನಾಶ್ (32) ಪತ್ನಿಯನ್ನ ಕೊಂದ ಪತಿ. ಒಂದೇ ಊರಿನ ಒಂದೇ ಬೀದಿಯ ಕೀರ್ತಿ ಹಾಗೂ ಅವಿನಾಶ್ 4 ವರ್ಷದ ಹಿಂದೆ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗು ಕೂಡ ಇದೆ. ಗಂಡ-ಹೆಂಡತಿ ನಡುವೆ ಕೆಲ ದಿನಗಳಿಂದ ವೈಮನಸ್ಸು ಉಂಟಾಗಿ ಜಗಳವಾಗುತ್ತಿತ್ತು. ಬುಧವಾರ ಮಧ್ಯಾಹ್ನ ಜಗಳ ಜೋರಾಗಿದ್ದು, ಗಂಡ ಅವಿನಾಶ್ ತನ್ನ ಪತ್ನಿ ಕೀರ್ತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

ವಿಷಯ ತಿಳಿಯುತ್ತಿದಂತೆ ಕೀರ್ತಿ ಪೋಷಕರು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿಯನ್ನ ಕೊಲೆ ಮಾಡಿ ಅವಿನಾಶ್ ತಪ್ಪಿಸಿಕೊಂಡು ಹೋಗಿ ಅರಣ್ಯ ಪ್ರದೇಶದಲ್ಲಿ ಅವಿತು ಕುಳಿತಿದ್ದ. ನಂತರ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ತನಿಖೆ ನೆಡೆಸಿ ಆತನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ಕೀರ್ತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌