- ಸಿ.ಟಿ ರವಿ ಹಾಗೂ ನನಗೆ ಮತ ಕೇಳುತ್ತೇವೆ । ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ,
ಸಹಕಾರ ಕ್ಷೇತ್ರದಲ್ಲಿ ಕೈಗೊಂಡ ಹಲವಾರು ಜನಪರ ಕಾರ್ಯಗಳು ಜ.೧೭ ರಂದು ನಡೆಯಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಶ್ರೀರಕ್ಷೆಯಾಗಿ ಗೆಲುವು ನಿಶ್ಚಿತ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಎಸ್. ನಿರಂಜನ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಚಿಕ್ಕಮಗಳೂರು ಕೃಷಿ ಪತ್ತಿನ ಸಹಕಾರ ಕ್ಷೇತ್ರದಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹಿಂದಿನ ಆಡಳಿತ ಮಂಡಳಿಯಲ್ಲಿಯೂ ನಿರ್ದೇಶಕರಾಗಿ ಸೇವೆ ಸಲ್ಲಿಸಿ ತಾಲೂಕು ವ್ಯಾಪ್ತಿಗೆ ಬರುವ ಎಲ್ಲಾ ಕೃಷಿಪತ್ತಿನ ಸಹಕಾರ ಸಂಘಗಳಿಗೆ ಡಿಸಿಸಿ ಬ್ಯಾಂಕಿನಿಂದ ಬರುವ ಸಾಲಸೌಲಭ್ಯಗಳನ್ನು ತಾರತಮ್ಯವಿಲ್ಲದೆ ತಲುಪಿಸಿದ್ದೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಕೆಲವು ಸಹಕಾರ ಸಂಘಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ ಅಂತಹ ಸಂಘಗಳಿಗೆ ಆರ್ಥಿಕ ಪುನಶ್ಚೇತನ ನೀಡುವ ಮೂಲಕ ಸಹಕಾರ ಸಂಘಗಳು ಆರ್ಥಿಕ ಚೇತರಿಕೆಯಾಗಿ ರೈತರಿಗೆ ಸಹಕಾರಿಯಾಗಲು ಶಕ್ತಿ ಮೀರಿ ಶ್ರಮಿಸಿದ್ದೇನೆ. ಜೊತೆಗೆ ನಮ್ಮ ಕ್ಷೇತ್ರ ಹೊರತುಪಡಿಸಿ ಅನೇಕ ರೈತರಿಗೆ ಸಾಲ ಸೌಲಭ್ಯ ಒದಗಿಸುವಲ್ಲಿ ಶ್ರಮಿಸಿದ್ದೇನೆಂದು ತಿಳಿಸಿದರು.
ಈ ಚುನಾವಣೆ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಬಲಾಢ್ಯರು ಮತ್ತು ಸಾಮಾನ್ಯರ ನಡುವೆ ನಡೆಯುವ ಚುನಾವಣೆ ಯಾಗಿದ್ದು, ನಾನೊಬ್ಬ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗಿದ್ದು, ಅಧ್ಯಕ್ಷನಾಗುವ ಸಂದರ್ಭದಲ್ಲಿ ಕಡೆಗಣಿಸಲಾಯಿತು ಎಂದು ವಿಷಾಧಿಸಿದರು.
ಕ್ಷೇತ್ರದಲ್ಲಿ 32 ಸಹಕಾರ ಸಂಘಗಳ ಪದಾಧಿಕಾರಿಗಳ ಮತದಾರರಿದ್ದು, ಅವರೆಲ್ಲಾ ತಮ್ಮನ್ನು ಬೆಂಬಲಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿ.ಟಿ ರವಿ ಹಾಗೂ ನನಗೆ ಮತ ಕೇಳುತ್ತೇವೆ. ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದರು.
ಸುದ್ಧಿಗೋಷ್ಠಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಘುನಂದನ್, ನಿರ್ದೇಶಕ ರಾಜು, ಸದಸ್ಯ ರಮೇಶ್, ಗಾಳಿಹಳ್ಳಿ ಶಿವು ಉಪಸ್ಥಿತರಿದ್ದರು.15 ಕೆಸಿಕೆಎಂ 4ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ನಿರಂಜನ್ ಮಾತನಾಡಿದರು.