)
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಮುಂದುವರಿಸುವಂತೆ ತಾವು ಯಾರನ್ನೂ ಕೇಳಿಲ್ಲ. ರಾಜಕಾರಣದಲ್ಲಿ ಇಂತಹ ಬೆಳವಣಿಗೆಗಳು ಸಹಜವಾಗಿದ್ದು, ಯಾವಾಗ ಏನು ಬೇಕಾದರೂ ಆಗಬಹುದು. ಹೈಕಮಾಂಡ್ ಸಾಕಷ್ಟು ಆಲೋಚಿಸಿ ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಅದನ್ನು ಪ್ರಶ್ನಿಸುವುದು ತಮ್ಮ ಕೆಲಸವಲ್ಲ. ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು, ತಮ್ಮ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿರುವ ತೃಪ್ತಿ ಇದೆ ಎಂದರು.ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ತಮ್ಮ ಅಭಿಪ್ರಾಯ. ಮಹಿಳೆಯರ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿರುವುದರಿಂದ ಸರ್ಕಾರದಲ್ಲಿ ಮಹಿಳೆಯರ ಧ್ವನಿ ಇರಬೇಕಾಗಿದೆ. ಕರ್ನಾಟಕದಲ್ಲಿಯೂ ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿ ಹೇಳಿದ್ದು, ಮುಂದಿನ ನಿರ್ಧಾರವನ್ನು ಕಾದು ನೋಡೋಣ ಎಂದರು.ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಚಟುವಟಿಕೆಗಳು ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗುವುದಿಲ್ಲ. ಈ ಹಿಂದೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ಮುಂದೆಯೂ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದ ಅವರು, ತಮ್ಮ ವಿರುದ್ಧದ ₹5000 ಕೋಟಿ ಆರೋಪದ ಕುರಿತು ದಾಖಲೆಗಳೊಂದಿಗೆ ಮಾತನಾಡಲಿ. ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬುವುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದರು.ರಾಜಕಾರಣದಲ್ಲಿ ಕೆಲವೊಮ್ಮೆ ಅಗ್ನಿಪರೀಕ್ಷೆಯಂತಹ ಸಂದರ್ಭಗಳು ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ತಾಳ್ಮೆ ಹಾಗೂ ಶಿಸ್ತು ಕಾಪಾಡಿಕೊಳ್ಳಬೇಕು. ಅವಕಾಶ ಸಿಕ್ಕಾಗ ತಮ್ಮ ಸಾಮರ್ಥ್ಯ ತೋರಿಸಬೇಕು. ಬೇರೆಯವರಿಗೆ ಅವಕಾಶ ಸಿಕ್ಕಾಗ ಅದನ್ನು ಗೌರವಿಸಬೇಕು. ಪದವಿ ಬರುತ್ತದೆ, ಹೋಗುತ್ತದೆ. ಆದರೆ, ಪಕ್ಷದ ಮೇಲಿನ ನಿಷ್ಠೆ ಮತ್ತು ಜನರ ಮೇಲಿನ ಬದ್ಧತೆ ಮುಂದುವರಿಯುತ್ತದೆ.
-ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಸಚಿವೆ.