ನಾನು ಡಮ್ಮಿ ಕ್ಯಾಂಡಿಡೇಟ್‌ ಎಂಬುದು ಎದುರಾಳಿಗಳ ಭಯದ ದಾಳ: ಗೀತಾ

KannadaprabhaNewsNetwork |  
Published : Apr 15, 2024, 01:17 AM IST
14ಎಸ್‌ಎಂಜಿಕೆಪಿ08: ಗೀತಾ  | Kannada Prabha

ಸಾರಾಂಶ

ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅಲೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಎದುರಾಳಿ ಬಗ್ಗೆ ಯೋಚನೆ ಮಾಡುವುದಿಲ್ಲ. ಇನ್ನು, ಕೆ.ಎಸ್‌.ಈಶ್ವರಪ್ಪನವರ ಸ್ಪರ್ಧೆಯಿಂದ ನಮಗೆ ಯಾವುದೇ ರೀತಿಯ ಲಾಭ ನಷ್ಟದ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನನ್ನ ಸ್ಪರ್ಧೆಯಿಂದ ವಿರೋಧಿಗಳಿಗೆ ಭಯ ಶುರುವಾಗಿದೆ. ಇದಕ್ಕಾಗಿ ನನ್ನನ್ನು ವೀಕ್ ಕ್ಯಾಂಡಿಡೇಟ್ ಎನ್ನುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ತಿರುಗೇಟು ನೀಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅಲೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಎದುರಾಳಿ ಬಗ್ಗೆ ಯೋಚನೆ ಮಾಡುವುದಿಲ್ಲ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅಭಿವೃದ್ಧಿ ರಿಪೋರ್ಟ್ ನೋಡಿದ್ದೇನೆ. ಅದರಲ್ಲಿ ಯಾವುದು ನಿಜವಿಲ್ಲ. ಇನ್ನು, ಕೆ.ಎಸ್‌.ಈಶ್ವರಪ್ಪನವರ ಸ್ಪರ್ಧೆಯಿಂದ ನಮಗೆ ಯಾವುದೇ ರೀತಿಯ ಲಾಭ ನಷ್ಟದ ಪ್ರಶ್ನೆಯೇ ಇಲ್ಲ ಎಂದರು.

ಕ್ಷೇತ್ರದ ತುಂಬಾ ನಾನು ಸಂಚಾರ ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ಬರಗಾಲ ಮೊದಲಾದ ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚು ಸಮಯ ಇರುತ್ತೇನೆ. ನನ್ನ ಮಕ್ಕಳು ದೊಡ್ಡವರಾದ ಹಿನ್ನೆಲೆಯಲ್ಲಿ ನನಗೆ ಯಾವ ಸಮಸ್ಯೆಯೂ ಇಲ್ಲ. ಜಿಲ್ಲೆಯಲ್ಲಿ ಬಗರ್‌ ಹುಕುಂ ಹಕ್ಕುಪತ್ರದ ಸಮಸ್ಯೆ ಇದೆ. ಇದನ್ನು ನನ್ನ ಸಹೋದರ ಮಧು ಬಂಗಾರಪ್ಪ ಜೊತೆಗೂಡಿ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು

ಇಂದು ನಾಮಪತ್ರ ಸಲ್ಲಿಕೆ: ನಾನು ಸೋಮವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಪಾಲ್ಗೊಳ್ಳಲ್ಲಿದ್ದಾರೆ. ಇವರೊಂದಿಗೆ ಹಲವು ಸಿನಿಮಾ ನಟರು ನಮ್ಮ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೀತಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್.ಪ್ರಸನ್ನಕುಮಾರ್‌, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌, ಎಸ್‌.ಕೆ.ಮರಿಯಪ್ಪ, ಎಚ್‌.ಪಿ.ಗಿರೀಶ್‌, ಜಿ.ಡಿ.ಮಂಜುನಾಥ್‌ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೆಯಲ್ಲಿ ಟೋಲ್‌ ಕಟ್ಟಬೇಡಿ: ಕುಮಾರಸ್ವಾಮಿ
ಕೆಪಿಎಸ್ಸಿ ನೇಮಕ ಹಗರಣ : ಮತ್ತೆ ಸಾಹುಕಾರ್‌ ಸಸ್ಪೆಂಡ್‌ಗೆ ಸಚಿವ ಸಂಪುಟ ಶಿಫಾರಸು