ನಾನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿ

KannadaprabhaNewsNetwork |  
Published : Aug 18, 2026, 01:45 AM IST
17ಎಚ್ಎಸ್ಎನ್16 :  | Kannada Prabha

ಸಾರಾಂಶ

ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಲ್ಲಿ ಮನವಿ ಸಲ್ಲಿಸಿದ್ದೇನೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದಾಗ ಈ ಬಾರಿ ಮುಸ್ಲಿಂ ಸಮಾಜ ಅಥವಾ ದಲಿತ ಸಮಾಜವನ್ನು ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದ ಈ ಬಾರಿ ಅಧ್ಯಕ್ಷ ಸ್ಥಾನವು ನನಗೆ ಸಿಗುವ ಭರವಸೆಯಲ್ಲಿ ಇದ್ದೇನೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ದಲಿತ ಸಮಾಜ ಹಾಗು ಮುಸ್ಲಿಂ ಸಮಾಜವು ಸ್ವಾತಂತ್ರ್ಯ ಪೂರ್ವದಿಂದಲೂ ಮತದಾನವನ್ನು ಮಾಡುತ್ತಾ ಬಂದಿದೆ. ಈ ಸಮಾಜವನ್ನು ಗುರುತಿಸಿ ಅಧ್ಯಕ್ಷ ಸ್ಥಾನ ನೀಡುವುದು ಬಹುತೇಕ ಪಕ್ಕ ಎಂಬ ಆತ್ಮವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖಂಡರಾದ ಸಿ ಆರ್ ಅಬ್ದುಲ್ ಹಾದಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ನಾನು ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡರಾದ ಸಿ ಆರ್ ಅಬ್ದುಲ್ ಹಾದಿ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ೪೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಮಾಜಿ ಮಂತ್ರಿ ಶ್ರೀಕಂಠಯ್ಯನವರ ಶಿಷ್ಯನಾಗಿ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಮಾಜಿ ಮಂತ್ರಿಗಳಾದ ಬಿ. ಶಿವರಾಂ, ಮಾಜಿ ಎಂಎಲ್ಸಿ ಎಸ್.ಎಂ. ಆನಂದ್ ಅವರ ಅಧಿಕಾರ ಅವಧಿಯಲ್ಲಿ ಕಾಂಗ್ರೆಸ್ ಸಮಿತಿಯಲ್ಲಿ ಕಾರ್ಯಕಾರಿ ಮಂಡಳಿಯ ಸದಸ್ಯನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಾಂಗ್ರೆಸ್ ಪಕ್ಷವು ಹಾಸನ ಜಿಲ್ಲೆಯಲ್ಲಿ ಎಲ್ಲಾ ಸಮಾಜಕ್ಕೂ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ನೀಡುತ್ತಾ ಬಂದಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ದಲಿತ ಸಮಾಜ ಅಥವಾ ಮುಸ್ಲಿಂ ಸಮಾಜಕ್ಕೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದೇನೆ.

ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಲ್ಲಿ ಮನವಿ ಸಲ್ಲಿಸಿದ್ದೇನೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದಾಗ ಈ ಬಾರಿ ಮುಸ್ಲಿಂ ಸಮಾಜ ಅಥವಾ ದಲಿತ ಸಮಾಜವನ್ನು ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದ ಈ ಬಾರಿ ಅಧ್ಯಕ್ಷ ಸ್ಥಾನವು ನನಗೆ ಸಿಗುವ ಭರವಸೆಯಲ್ಲಿ ಇದ್ದೇನೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ದಲಿತ ಸಮಾಜ ಹಾಗು ಮುಸ್ಲಿಂ ಸಮಾಜವು ಸ್ವಾತಂತ್ರ್ಯ ಪೂರ್ವದಿಂದಲೂ ಮತದಾನವನ್ನು ಮಾಡುತ್ತಾ ಬಂದಿದೆ. ಈ ಸಮಾಜವನ್ನು ಗುರುತಿಸಿ ಅಧ್ಯಕ್ಷ ಸ್ಥಾನ ನೀಡುವುದು ಬಹುತೇಕ ಪಕ್ಕ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮಪ್ಪನಾಣೆ ತಮಿಳುನಾಡಿಗೆ ನೀರು ಬಿಟ್ಟಿಲ್ಲ: ಶಾಸಕ ರಮೇಶ ಬಂಡಿಸಿದ್ದೇಗೌಡ ಸಮರ್ಥನೆ
ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆಯಿರಿ