ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶಿಕ್ಷಕರ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ಎಲ್ಲಾ ಸಂಘಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಭಾಗಿತ್ವದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ತಾಲೂಕಿನ ಶಿಕ್ಷಕರ ಪೈಕಿ ನಾನೂ ಕೂಡ ಒಬ್ಬ ಶಿಕ್ಷಕ ಹೊರತು ಅಧಿಕಾರಿಯಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶೈಕ್ಷಣಿಕ ಪರಿಸರವನ್ನು ಉತ್ತಮಗೊಳಿಸೋಣ ಎಂದು ಇಲ್ಲಿ ಕಾರ್ಯಾಭಾರ ಆರಂಭಿಸಿದಾಗ ಹೇಳಿದ್ದೆ. ಅದರಂತೆ ನಡೆದಿದ್ದೇನೆ ಎಂಬ ಸಾರ್ಥಕತೆ ಇದೆ ಎಂದರು.ನಾಗಮಂಗಲ ಶೈಕ್ಷಣಿಕವಾಗಿ ಹಿಂದುಳಿದ ತಾಲೂಕೇನಲ್ಲ. ಇಲ್ಲಿಯೂ ಪ್ರತಿಭಾವಂತರಿದ್ದು ಉತ್ತಮ ವಿದ್ಯಾರ್ಥಿಗಳನ್ನು ತಯಾರು ಮಾಡುವ ಉತ್ತಮ ಶಿಕ್ಷಕರಿದ್ದಾರೆ. ಈ ಕಾರ್ಯವನ್ನು ಸಮರ್ಪಕವಾಗಿ ಮಾಡಿದ್ದೇನೆ ಎನ್ನುವ ಸಂತೃಪ್ತ ಭಾವನೆ ನನಗಿದೆ ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಎಸ್.ಜಗನ್ನಾಥ್ ಪ್ರಾಸ್ತಾವಿಕ ನುಡಿ ನುಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಮಂಜೇಗೌಡ, ಸಾವಿತ್ರಿ ಬಾಯಿಪುಲೆ ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಿ, ತಾಲೂಕು ಘಟಕದ ಅಧ್ಯಕ್ಷೆ ಪದ್ಮ, ಜಿಪಿಟಿ ಸಂಘದ ಅಧ್ಯಕ್ಷ ನಿಂಗರಾಜು, ಕಾರ್ಯದರ್ಶಿ ಪಿ.ಮಹೇಶ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ವಿಶ್ವಮಂಜುಸ್ವಾಮಿ, ಕಾರ್ಯದರ್ಶಿ ಡಿ.ಕೆ.ವಿನಯ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಹಾಗೂ ಸಾಹಿತಿ ತಿಮ್ಮರಾಯಿಗೌಡ, ಮೈಲಾರಪಟ್ಟಣ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಎನ್.ಮಂಜುನಾಥ್ ಸೇರಿದಂತೆ ಮುನ್ನೂರಕ್ಕೂ ಹೆಚ್ಚು ಶಿಕ್ಷಕರು ಇದ್ದರು.