ಕನ್ನಡಪ್ರಭ ವಾರ್ತೆ ಪಾಂಡವಪುರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಪಕ್ಷದ ಹೈಕಮಾಂಡ್ ನಾಯಕರು, ರಾಜ್ಯ ನಾಯಕರು ಚರ್ಚಿಸಿ ತಳಮಟ್ಟದ ಕಾರ್‍ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.
ಚನ್ನಪಟ್ಟಣದ ಜತನೆ ಎಚ್‌ಡಿಡಿ ಹಾಗೂ ಎಚ್‌ಡಿಕೆ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಪಕ್ಷದ ನಾಯಕರು ನನಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಅದರಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ. ಹಾಗಾಗಿ ನಾನು ಅಭ್ಯರ್ಥಿ ಆಕಾಂಕ್ಷಿಯಲ್ಲ ಎಂದರು.ಸಿಎಸ್ಪಿಯಿಂದ ಉತ್ತಮ ಕೆಲಸ:
ನೆರೆ ಸಂಕಷ್ಟಕ್ಕೆ ಸಿಲುಕಿರುವ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಸಿ.ಎಸ್.ಪುಟ್ಟರಾಜು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ 10 ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಹೆಚ್ಚಿನ ತಪ್ಪಿದಂತಾಗಿದೆ ಎಂದರು.ಈಗ ಹೆಚ್ಚಿನ ನೀರು ಬಂದ ಹಿನ್ನೆಲೆಯಲ್ಲಿ ಸ್ವಲ್ಪ ಸಮಸ್ಯೆಯಾಗಿದೆ. ಕ್ಷೇತ್ರದ ಶಾಸಕರ ಬಗ್ಗೆ ನಾನು ಪ್ರತಿಕ್ರಿಯಸಲ್ಲ. ಸಿ.ಎಸ್. ಪುಟ್ಟರಾಜು ಅವರ ಅಭಿವೃದ್ಧಿಯ ಬಗ್ಗೆ ಕ್ಷೇತ್ರದಲ್ಲಿ ಗಿಡಮರಗಳೇ ಮಾತನಾಡುತ್ತೇವೆ. ಮುಂದಿನ ದಿನಗಳಲ್ಲಿ ಜನರೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ಟಾಂಗ್ ನೀಡಿದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಕಳೆದ 25 ವರ್ಷಗಳಿಂದ ಕಾವೇರಿ ನದಿಯಿಂದ ಇಷ್ಟು ದೊಡ್ಡಮಟ್ಟದಲ್ಲಿ ನದಿಗೆ ನೀರು ಹರಿಸಿರಲಿಲ್ಲ. ಇದೀಗ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಸ್ವಲ್ಪ ಸಮಸ್ಯೆಯಾಗಿದೆ ಎಂದರು.ಮಂತ್ರಿಯಾಗಿದ್ದ ವೇಳೆ 10 ಕೋಟಿ ರು. ವೆಚ್ಚದಲ್ಲಿ ಕಾವೇರಿ ನದಿಗೆ ತಡೆಗೋಡೆ ನಿರ್ಮಿಸಲಾಗಿದೆ. ಇನ್ನಷ್ಟು ಕೆಲಸವಾಗಬೇಕಿದೆ. ಸರ್ಕಾರ ಆ ಬಗ್ಗೆ ಚಿಂತನೆ ನಡೆಸಬೇಕು. ಪ್ರವಾಹ ಬಂದ ಸಂದರ್ಭದಲ್ಲಿ ಎಲ್ಲರು ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದರು.
ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು, ಶಾಸಕ ಎಚ್.ಟಿ.ಮಂಜು, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಜೆಡಿಎಸ್ ಯುವ ನಾಯಕ ಸಿ.ಪಿ.ಶಿವರಾಜು, ಮುಖಂಡರಾದ ಗವಿಗೌಡ ಪ್ರವೀಣ್, ಚೇತನ್, ಗ್ರಾಪಂ ಮಾಜಿ ಅಧ್ಯಕ್ಷ ಮಿಥುನ್, ದಿಲೀಪ್, ಮಂಜು, ನಿರಂಜನ್ ಸೇರಿದಂತೆ ಹಲವರು ಮುಖಂಡರು ಹಾಜರಿದ್ದರು.