ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲೆಯಲ್ಲಿ ಮೋದಿ ಅಲೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗರಂ ಆಗಿ ಉತ್ತರಿಸಿದ ವಿದ್ಯಮಾನ ಶುಕ್ರವಾರ ನಡೆದಿದೆ.
ಟಿಕೆಟ್ ಘೋಷಣೆ ಬಳಿಕ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ ಅವರನ್ನು ಸುದ್ದಿಗಾರರು ಮಾತನಾಡಿಸಿದರು. ಮೋದಿ ಅಲೆ ಎದುರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ವರ್ಕ್ ಔಟ್ ಆಗುತ್ತಾ ಎಂಬ ಪ್ರಶ್ನೆಗೆ ಪದ್ಮರಾಜ್ ಗರಂ ಆಗಿಯೇ ಉತ್ತರಿಸಿದರು.ನಾವು ಇಂತಹ ಜಾತಿಯಲ್ಲೇ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿದ್ದಲ್ಲ. ನಮ್ಮ ಜಾತಿ ಧರ್ಮದೊಂದಿಗೆ ಇನ್ನೊಂದು ಧರ್ಮಕ್ಕೆ ಗೌರವ ನೀಡುವುದು ಅದು ಮಾನವ ಧರ್ಮ. ಇಲ್ಲಿ 40 ವರ್ಷಗಳಿಂದ ಸಾಕಷ್ಟು ಸಾಧನೆ ಮಾಡಿದ್ದಾರೆ. 1991 ರಿಂದ ಬಿಜೆಪಿ ಸಂಸದರು ಇದ್ದರೂ ಎದೆ ತಟ್ಟಿ ಹೇಳುವ ಯಾವುದೇ ಸಾಧನೆ ಮಾಡಿಲ್ಲ. ಪ್ರತಿ ಬಾರಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಇದರಿಂದ ನಿಮ್ಮವರಿಂದ ಕೆಲಸ ಮಾಡಲು ಆಗುತ್ತಿಲ್ಲ ಎಂಬುದು ಗೊತ್ತಾಗುತ್ತದೆ. ಅಭ್ಯರ್ಥಿ ಬದಲಾವಣೆ ಮಾಡಿದರೆ ಸಾಲದು, ಅಭಿವೃದ್ಧಿ ಕೆಲಸ ಕೂಡ ಮಾಡಬೇಕು. ಬಿಜೆಪಿಯವರು ಭಾವನಾತ್ಮಕವಾಗಿ ಜನರನ್ನು ಯಾಮಾರಿಸುತ್ತಿದ್ದಾರೆ. ಅಭಿವೃದ್ಧಿ ವಿಚಾರಗಳನ್ನು ಇರಿಸಿಕೊಂಡು ರಾಜಕೀಯ ಮಾಡಬೇಕು ಎಂದರು.
ಬಳಿಕ ಪದ್ಮರಾಜ್ ಅವರು ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಷ್ಟ್ರಪಿತ, ಮಂಗಳೂರು ಪುರಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ, ಬಾವುಟಗುಡ್ಡೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ನಮನ ಸಲ್ಲಿಸಿ, ಟಾಗೋರ್ ಪಾರ್ಕ್‌ನಲ್ಲಿ ರವೀಂದ್ರನಾಥ ಟಾಗೋರ್ ಪ್ರತಿಮೆಗೆ ನಮನ ಸಲ್ಲಿಸಿದರು.ಪೂಜಾರಿ ಹಾದಿಯಲ್ಲಿ ಮುನ್ನಡೆಯುತ್ತೇನೆ: