ನನ್ನಿಂದಲೇ ಬೆಳಕು ಹರಿಯುತ್ತೆ ಎಂಬ ಮನೋಭಾವದವ ನಾನಲ್ಲ

KannadaprabhaNewsNetwork |  
Published : Apr 04, 2024, 01:07 AM IST
ಹೊಳಲ್ಕೆರೆ ಪೋಟೋ ಸುದ್ದಿ | Kannada Prabha

ಸಾರಾಂಶ

ನನ್ನನ್ನು ನಂಬಿ ಬಂದವರಿಗೆ ಯಾವತ್ತೂ ಮೋಸ ಮಾಡುವವನಲ್ಲ. ಹಣದ ವ್ಯಾಮೋಹವಿರುವ ರಾಜಕಾರಣಿಗಳು ನನ್ನಿಂದಲೇ ಬೆಳಕು ಹರಿಯಲಿದೆ ಎಂದು ನಂಬಿಸಿ ಮೋಸ ಮಾಡುತ್ತಾರೆ. ಈ ವಿಭಾಗಕ್ಕೆ ಸೇರಿದವ ನಾನಲ್ಲವೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ಹೊಳಲ್ಕೆರೆ: ನನ್ನನ್ನು ನಂಬಿ ಬಂದವರಿಗೆ ಯಾವತ್ತೂ ಮೋಸ ಮಾಡುವವನಲ್ಲ. ಹಣದ ವ್ಯಾಮೋಹವಿರುವ ರಾಜಕಾರಣಿಗಳು ನನ್ನಿಂದಲೇ ಬೆಳಕು ಹರಿಯಲಿದೆ ಎಂದು ನಂಬಿಸಿ ಮೋಸ ಮಾಡುತ್ತಾರೆ. ಈ ವಿಭಾಗಕ್ಕೆ ಸೇರಿದವ ನಾನಲ್ಲವೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬುಧವಾರ ನಡೆದ ವಿಧಾನಸಭಾ ಕ್ಷೇತ್ರದ ಮುಖಂಡರ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಸಾರ್ವಜನಿಕರ ಬದುಕನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಮಗ ರಘುಚಂದನ್ ಚಿತ್ರದುರ್ಗ ಲೋಕಸಭಾ ಕ್ಷೇತ್ರಾದ್ಯಂತ ಹಳ್ಳಿಗಳನ್ನು ಸುತ್ತಾಡಿ ಸಂಘಟನೆ ಮಾಡಿದ್ದಾನೆ. ಹಾಗಾಗಿ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆಯಿಂದ ಟಿಕೆಟ್ ಕೇಳಿದ್ದು ನಿಜ. ಆದರೆ ಪಕ್ಷದ ವರಿಷ್ಠರು ಗೋವಿಂದ ಕಾರಜೋಳರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅದಕ್ಕಾಗಿ ನಾನು ಬೇಸರ ಪಟ್ಟುಕೊಳ್ಳುವುದಿಲ್ಲ. ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಕಾರಜೋಳ ಅವರಲ್ಲಿ ವಿನಂತಿಸಿದರು.

ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕು. ಅದಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಕ್ಷೇತ್ರದ ಜನ ಹಗಲು ರಾತ್ರಿ ಸುತ್ತಾಡಿ ಹೆಚ್ಚಿನ ಮತಗಳನ್ನು ನೀಡಬೇಕು ಎಂದು ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.

ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, 2024ರ ಪಾರ್ಲಿಮೆಂಟ್ ಚುನಾವಣೆ ದೇಶಕ್ಕಾಗಿ ಮೋದಿಗಾಗಿ ನಡೆಯುವ ಚುನಾವಣೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ದೇಶವನ್ನಾಳಿದೆ. ನರೇಂದ್ರ ಮೋದಿ ಹತ್ತು ವರ್ಷಗಳ ಕಾಲ ಪ್ರಧಾನಿಯಾಗಿದ್ದುಕೊಂಡು ದುಪ್ಪಟ್ಟು ಅಭಿವೃದ್ಧಿ ಮಾಡಿರುವುದನ್ನು ದೇಶದ ಜನ ತುಲನಾತ್ಮಕವಾಗಿ ನೋಡುತ್ತಿದ್ದಾರೆ. ಅದರಲ್ಲೂ ಒಂದೆ ಕುಟುಂಬದವರು 38 ವರ್ಷಗಳ ಕಾಲ ದೇಶವನ್ನು ಆಳಿದ್ದಾರೆ. ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಕೀರ್ತಿ ಗೌರವ ಹೆಚ್ಚಾಗಿದೆ. ಭಯೋತ್ಪಾದಕರು ಬಿಲ ಸೇರಿದ್ದಾರೆ. ವಿದ್ಯಾವಂತರ ಸಂಖ್ಯೆ ಜಾಸ್ತಿಯಾಗಿದೆ. ಮೋದಿ ಅವರ ಟ್ರಂಪ್ ಕಾರ್ಡ್ ಇಟ್ಟುಕೊಂಡು ಬೇರೆ ಕಡೆ ಅಲೆಯಬೇಕಾಗಿಲ್ಲ. ಸಂತ ನಮ್ಮ ದೇಶದ ಪ್ರಧಾನಿಯಾಗಿರುವುದರಿಂದ ಅವರ ಕೈಬಲಪಡಿಸಲು 26ರಂದು ನಡೆಯುವ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದರು.

ವಿಧಾನಪರಿಷತ್ ಸದಸ್ಯ ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಲೋಕಸಭಾ ಚುನಾವಣೆ ಸಂಚಾಲಕ ಎಸ್.ಲಿಂಗಮೂರ್ತಿ, ಬಿಜೆಪಿ ಮಂಡಲ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಪುರಸಭೆ ಸದಸ್ಯರು, ಹಿರಿಯ ಮುಖಂಡರುಗಳು, ಪಕ್ಷದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ