ನಾನು ಆಣೆ- ಪ್ರಮಾಣ ಮಾಡಲು ತಯಾರಿದ್ದೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

KannadaprabhaNewsNetwork |  
Published : Apr 09, 2025, 12:36 AM ISTUpdated : Apr 09, 2025, 05:17 AM IST
HDK

ಸಾರಾಂಶ

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ  ಮಾತನಾಡುತ್ತಾ ತಿಳಿಸಿದರು.

 ಮಂಡ್ಯ : ನಾನು ಮುಖ್ಯಮಂತ್ರಿಯಾಗುವ ವೇಳೆ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದರಾ? ಅವರನ್ನು ಮಂತ್ರಿ ಮಾಡಲು ನಾನು ಶ್ರಮ ಹಾಕಿದ್ದೇನೆ. ತಾವು ಮಂತ್ರಿಯಾಗುವುದಕ್ಕಾಗಿ ನನ್ನ ಮೂರು ಗಂಟೆವರೆಗೆ ನಿದ್ದೆ ಮಾಡಲು ಬಿಟ್ಟಿಲ್ಲ. ಆತನನ್ನು ಮಂತ್ರಿ ಮಾಡಲು ೫೦ ಜನ ಶಾಸಕರನ್ನು ಸೇರಿಸಿದ್ದೇನೆ. ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ. ಈ ವಿಷಯವಾಗಿ ನಾನು ಎಲ್ಲಿ ಬೇಕಾದರೂ ಆಣೆ- ಪ್ರಮಾಣಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ನಾನು ರಾಜಕೀಯದಲ್ಲಿ ದುಡ್ಡು ಮಾಡಬೇಕೆಂದು ಎಂದೂ ಆಸೆಪಟ್ಟವನಲ್ಲ. ನಾನು ಜನರ ಮಧ್ಯ ೨೪ ಗಂಟೆ ಕೆಲಸ ಮಾಡಿದ್ದೇನೆ.

ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ. ಇದು ನನ್ನ ವೈಯಕ್ತಿಕ ಸಮಸ್ಯೆ.ಎಲ್ಲವನ್ನೂ ದೇವರು ನೋಡುತ್ತಾನೆ ಎಂದು ಹೇಳಿದರು.

ಸ್ವ ಚರಿತ್ರೆ ಬಗ್ಗೆ ಚಲುವರಾಯಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಸ್ವ ಚರಿತ್ರೆ ಬಗ್ಗೆ ಚರ್ಚೆ ಮಾಡೋದು ಮುಖ್ಯವೋ, ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು ಮುಖ್ಯವೋ. ಪ್ರತಿಯೊಬ್ಬ ಮನುಷ್ಯ ಕೆಲವರ ಜೊತೆ ಇದ್ದಾಗ ಹಲವಾರು ಸಮಸ್ಯೆಗಳನ್ನು ಮಾಡಿಕೊಳ್ಳುತ್ತೇವೆ. ಯಾವ ಮನುಷ್ಯನೂ ಪರಿಶುದ್ಧ ಅಲ್ಲ. ತಪ್ಪನ್ನು ಸರಿಪಡಿಸಿಕೊಳ್ಳಲು ಭಗವಂತ ಅವಕಾಶ ಕೊಡುತ್ತಾನೆ. ನಾನು ವಿಧಾನಸಭೆಯ ಕಲಾಪದಲ್ಲಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ಇಲ್ಲ ಎಂದು ಹೇಳುತ್ತಿಲ್ಲ. ಚಲುವರಾಯಸ್ವಾಮಿ ಏನೇನು ಮಾಡಿದ್ದಾರೆ ಎನ್ನುವುದೂ ಗೊತ್ತಿದೆ. ಇಂತಹ ವಿಚಾರಗಳನ್ನು ಬಿಟ್ಟು ಜನರ ಬದುಕಿನ ಬಗ್ಗೆ ಚರ್ಚೆ ಮಾಡಿ ಎಂದು ಹೇಳಿದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ