- ಚನ್ನಗಿರಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಸಿ.ಕುಮಾರಸ್ವಾಮಿ ಹೇಳಿಕೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 15 ವರ್ಷಗಳಿಂದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ನೀಡಿದ ಎಲ್ಲ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ನನ್ನ ಪಕ್ಷನಿಷ್ಠೆ ಗಮನಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್, ನಿಕಟಪೂರ್ವ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಎಂ.ಪಿ.ರೇಣುಕಾಚಾರ್ಯ, ಮಾಡಾಳು ಮಲ್ಲಿಕಾರ್ಜುನ್ ಅವರು ನನ್ನನ್ನು ಚನ್ನಗಿರಿ ತಾಲೂಕು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ತಾಲೂಕಿನಲ್ಲಿ ಬಿಜೆಪಿ ಸದೃಢವಾಗಿದ್ದು, ಪಕ್ಷದ ಕಾರ್ಯಕರ್ತರು ಧೃತಿಗೆಡಬಾರದು. ಕ್ಷೇತ್ರದಲ್ಲಿ ಶಾಸಕ ಸ್ಥಾನ ಮಾತ್ರ ಕಾಂಗ್ರೆಸ್ ವಶದಲ್ಲಿ ಇರಲಿದೆ. ಮುಂದೆ ಬರಲಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದರು.ನಾನು ತಾಲೂಕು ಬಿಜೆಪಿ ಅಧ್ಯಕ್ಷನಾಗಿದ್ದು, ಮುಂದೆ ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಪಿ.ಬಿ.ನಾಯಕ, ಕಾಯಿ ಮಂಜುನಾಥ್, ಪಾರಿ ಪರಮೇಶ್, ಶಿವಕುಮಾರ್, ದಿಗ್ಗೇನಹಳ್ಳಿ ನಾಗರಾಜ್ ಹಾಜರಿದ್ದರು.
- - - -14ಕೆಸಿಎನ್ಜಿ1.ಜೆಪಿಜಿ:ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಮಲಹಾಳ್ ಡಿ.ಸಿ.ಕುಮಾರಸ್ವಾಮಿ ಮಾತನಾಡಿದರು.