ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Oct 22, 2024, 12:37 AM ISTUpdated : Oct 22, 2024, 12:37 PM IST
21ಎಚ್‌ವಿಆರ್‌5 | Kannada Prabha

ಸಾರಾಂಶ

ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾರಿಗೂ ಟಿಕೆಟ್ ಕೊಡಿಸುತ್ತೇನೆ ಎಂದು ಮಾತು ಕೊಟ್ಟಿಲ್ಲ. ಸುಮಾರು 57 ಜನ ಆಕಾಂಕ್ಷಿಗಳು ಇದ್ದರು. ಎಲ್ಲರಿಗೂ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಒಂದೇ ಮಾತು ಹೇಳಿದ್ದೆ. ಇದು ನನ್ನ ನಿರ್ಣಯ ಅಲ್ಲ, ಪಕ್ಷದ ನಿರ್ಣಯ. ನಾನು ಯಾರಿಗೂ ಮಾತುಕೊಟ್ಟಿಲ್ಲ. ಮಾತು ತಪ್ಪಿಲ್ಲ ಎಂದು ಹೇಳಿದರು. 

ಮಗನನ್ನು ನಿಲ್ಲಿಸಲು ಆಸಕ್ತಿ ಇರಲಿಲ್ಲನನ್ನ ಮಗನನ್ನು ನಿಲ್ಲಿಸಲು ಆಸಕ್ತಿ ಇರಲಿಲ್ಲ. ಕೊನೆಯ ಗಳಿಗೆವರಿಗೂ ಬೇಡ ಅಂತಾ ಹೇಳಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ನೀಡಿದೆ. ಗೆಲ್ಲುವ ದೃಷ್ಟಿಯಿಂದ ಟಿಕೆಟ್ ನೀಡುವ ತೀರ್ಮಾನ ಮಾಡಿದೆ. ಪಕ್ಷದ ಆದೇಶವನ್ನು ಪರಿಪಾಲನೆ ಮಾಡುವುದು ನನ್ನ ಕಾರ್ಯ. ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತನಾಡಿ ಟಿಕೆಟ್ ಫೈನಲ್ ಮಾಡಿದ್ದಾರೆ ಎಂದು ಹೇಳಿದರು.

ಸಾಮಾನ್ಯ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ. ಅವರಿಗೆ ಕ್ಯಾಬಿನೆಟ್ ಸ್ಥಾನ ನೀಡಿದ್ದೇನೆ. ಹಲವಾರು ಸ್ಥಾನಮಾನ ಮಾಡಿದ್ದೇವೆ. ಶ್ರೀಕಾಂತ್ ದುಂಡಿಗೌಡರ ಜೊತೆ ಮಾತನಾಡುತ್ತೇನೆ. ಮನವೊಲಿಸಲು ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವತ್ತಿನ ಬೆಳವಣಿಗೆ ಗೊತ್ತಿಲ್ಲ. ನಿನ್ನೆ ತಡರಾತ್ರಿ ಮನವೊಲಿಸಲು ಪ್ರಯತ್ನ ನಡೆದಿತ್ತು. ರಾಷ್ಟ್ರೀಯ ವರಿಷ್ಠರು ಮಾತುಕತೆ ಮಾಡಿ ಮನವೊಲಿಸಲು ಕಾರ್ಯ ಮಾಡುತ್ತಾರೆ. 

ಸರಿಯಾಗುತ್ತದೆ ಅನ್ನುವ ವಿಶ್ವಾಸ ಇದೆ. ಸಿ.ಪಿ. ಯೋಗೇಶ್ವರಗೆ ಸ್ವರ್ಧೆ ಮಾಡುವ ಆಸೆ ಇದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕ್ಷೇತ್ರ ಆಗಿದ್ದು, ಅವರಿಬ್ಬರೂ ಮಾತುಕತೆ ಮಾಡಿಕೊಂಡು ಹೊಂದಾಣಿಕೆ ಆಗಬೇಕಿತ್ತು. ತಡವಾಗಿದ್ದಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು. ನಮ್ಮ ಪಕ್ಷದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸರಿಪಡಿಸುವ ಕಾರ್ಯ ಮಾಡುತ್ತದೆ. ಸಿ.ಪಿ. ಯೋಗೇಶ್ವರ ಕಾಂಗ್ರೆಸ್ ಮುಖಂಡರ ಜೊತೆ ಸಂಪರ್ಕದಲ್ಲಿರುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...