)
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಯೋಜನೆ ಹಾಗೂ ಸರ್ಕಾರದ ಜಾಗವಾಗಿದೆ. ಇದರಲ್ಲಿ ಬೇರೆಯವರ ಕೈವಾಡ ಹೇಗಿರುತ್ತದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಯೋಜನೆ ಬಗ್ಗೆ ಪೂರ್ವ ಮಾಹಿತಿ ನನಗೆ ಇರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಬಂದ ತಕ್ಷಣ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಯಾರದ್ದೇ ತಪ್ಪಿದ್ದರೂ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.ಮೆಟ್ರೋ ದರ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಪೆಟ್ರೋಲ್, ಡೀಸೆಲ್, ಬಂಗಾರ, ಬೆಳ್ಳಿ, ಡಾಲರ್, ಗ್ಯಾಸ್ ಸೇರಿದಂತೆ ನೂರಾರು ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಒಂದೇ ವಿಷಯವನ್ನು ಪ್ರಶ್ನಿಸುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳಂತಹ ಅನಿಷ್ಟ ಪದ್ಧತಿಗಳನ್ನು ಬೇರುಮಟ್ಟದಿಂದ ಕಿತ್ತುಹಾಕಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದರು.ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಲ್ಲಿ ವಿಳಾಸವಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಸೈಟ್ ತೆಗೆದುಕೊಂಡಿದ್ದಾರೆ, ಮನೆ ನಿರ್ಮಿಸುತ್ತಾರೆ ಎಂದು ಕೇಳಿದ್ದೇನೆ ಎಂದು ಉತ್ತರಿಸಿದರು.ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 26 ಕಂತುಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರತಿ ಲಾಭಾರ್ಥಿಗೆ ಒಟ್ಟು ₹52 ಸಾವಿರ ನೀಡಲಾಗಿದೆ ಎಂದರು.