ಕನ್ನಡಪ್ರಭ ವಾರ್ತೆ ಮುಧೋಳ
ಮುಧೋಳ ತಾಲೂಕು ಪರಿಶಿಷ್ಟ ಜಾತಿ ಸಮುದಾಯಗಳ ವತಿಯಿಂದ ಸೋಮವಾರ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಸಮುದಾಯದ ಜನಸಂಖ್ಯಾಧಾರಿತ ಒಳ ಮೀಸಲಾತಿಗಾಗಿ ಶ್ರಮಿಸಿದ್ದಕ್ಕೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾತಿ, ಶೋಷಿತರ ಹಾಗೂ ಅರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಮೀಸಲಾತಿ ಕಲ್ಪಿಸುವ ಮೂಲಕ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅದರಂತೆ ಪರಿಶಿಷ್ಟ ಜಾತಿಗೆ ಸೇರಿದ 101 ಉಪ ಜಾತಿಗಳ ಜನಾಂಗಕ್ಕೆ ಜನಸಂಖ್ಯೆ ಆಧಾರದ ಮೇಲೆ ಶೇಕಡಾವಾರು ಒಳಮೀಸಲಾತಿ ನೀಡಬೇಕೆಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮಾಜಿ ಸಚಿವ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಅಷ್ಟರಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ಒಳಮೀಸಲಾತಿ ಕುರಿತು ಚರ್ಚೆಗೆ ಬರಲಿಲ್ಲ. ಇತ್ತೀಚೆಗೆ ಸುಪ್ರಿಂ ಕೋರ್ಟ್ ಎಲ್ಲ ರಾಜ್ಯಗಳು ಪರಿಶಿಷ್ಟ ಜಾತಿ ಒಳಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಹದಿನೈದು ದಿನದೊಳಗಾಗಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಪರಿಶಿಷ್ಟ ಜಾತಿ ಸಮುದಾಯದ ಮುಖಂಡ ಮುತ್ತಣ್ಣ ಬೆಣ್ಣೂರ ಮಾತನಾಡಿ, ಪರಿಶಿಷ್ಟ ಜಾತಿ ಸಮುದಾಯಗಳ ಒಳ ಮೀಸಲಾತಿ ಹೋರಾಟದ ಕುರಿತು ವಿವರಿಸಿದರು.
------
------------------------------------------------
ಇತ್ತೀಚೆಗೆ ಸುಪ್ರಿಂ ಕೋರ್ಟ್ ಎಲ್ಲ ರಾಜ್ಯಗಳು ಪರಿಶಿಷ್ಠ ಜಾತಿ ಒಳಮೀಸಲಾತಿ ನೀಡಬೇಕೆಂದು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಹದಿನೈದು ದಿನದೊಳಗಾಗಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕೈಗೊಳ್ಳಬೇಕಾಗುತ್ತದೆ.