ಎಂಎಲ್‌ಸಿ ಮಾಡುವಂತೆ ನಾನು ಯಾರನ್ನೂ ಕೋರಿಲ್ಲ

KannadaprabhaNewsNetwork |  
Published : Jun 15, 2026, 02:15 AM IST
ಚಿತ್ರದುರ್ಗ  ಎರಡನೇ ಪುಟದ ಲೀಡ್    | Kannada Prabha

ಸಾರಾಂಶ

ಮಾಜಿ ಸಚಿವ ಎಚ್.ಆಂಜನಯ ಭಾನುವಾರಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾಜಿ ಸಚಿವ ಎಚ್.ಆಂಜನೇಯ ಸ್ಪಷ್ಟನೆ । ನಿಷ್ಟಾವಂತರಿಗೆ ಅವಕಾಶ ಮಾಡಿಕೊಡಲು ಮನವಿಕನ್ನಡಪ್ರಭ ವಾರ್ತೆ ಚಿತ್ರದುರ್ಗ

ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ.ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ನಮ್ಮನ್ನು ಕಡೆಗಣಿಸಿಲ್ಲ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ಮುಂದುವರಿಸುತ್ತೇನೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್‍ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ಸಾಕ್ಷೀಕರಿಸಲು ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಕಲ ವ್ಯವಸ್ಧೆ ಮಾಡಿಕೊಳ್ಳಲಾಗಿದೆ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್‍ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್‍ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಆಂಜನೇಯಮನವಿ ಮಾಡಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿ ಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೆಲ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜು, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ವಕ್ಪ್ ಬೋರ್ಡ್ ಮಾಜಿ ಚೇರ್ಮನ್ ಅನ್ವರ್ ಭಾಷಾ, ಚಳ್ಳಕೆರೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಹೆಚ್.ಅಂಜಿನಪ್ಪ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಸುದ್ದಿಗೋಷ್ಟಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಮೂಲಗಳಲಿಲ್ಲದ ರೈತರ ಬದುಕು ಬರಡು
ಮಣ್ಣಿನ ಸಂರಕ್ಷಣೆಯಿಂದ ಅನ್ನದ ಭದ್ರತೆ ಖಾತ್ರಿ