ಯಾವ ಷರತ್ತು ಇಲ್ಲದೇ ಕಾಂಗ್ರೆಸ್‌ ಸೇರಿದ್ದೇನೆ - ಓಲೇಕಾರ

KannadaprabhaNewsNetwork |  
Published : May 03, 2024, 01:11 AM ISTUpdated : May 03, 2024, 12:24 PM IST
Congress flag

ಸಾರಾಂಶ

ನಾನು ಯಾವುದೇ ಷರತ್ತು ಇಲ್ಲದೇ ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್ ಸೇರ್ಪಡೆ ಆಗುವಂತೆ ಅನೇಕರು ಒತ್ತಾಯಿಸುತ್ತಿದ್ದರು. ಹೀಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಮಾಜಿ ಶಾಸಕ ನೆಹರು ಓಲೇಕಾರ ಹೇಳಿದರು.

ಹಾವೇರಿ:ನಾನು ಯಾವುದೇ ಷರತ್ತು ಇಲ್ಲದೇ ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್ ಸೇರ್ಪಡೆ ಆಗುವಂತೆ ಅನೇಕರು ಒತ್ತಾಯಿಸುತ್ತಿದ್ದರು. ಹೀಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಮಾಜಿ ಶಾಸಕ ನೆಹರು ಓಲೇಕಾರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿಯಲ್ಲಿ ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಏನೂ ಅನುಕೂಲ ಆಗಿಲ್ಲ, ಸಂವಿಧಾನ ಬದಲಾವಣೆ ಮಾಡುತ್ತೇವೆ. 

ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಸಂವಿಧಾನಕ್ಕೆ ಅಪಚಾರ ಆಗುತ್ತೆ. ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದರು. 

ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿದಾಗಲೂ ಬಿಜೆಪಿಯಲ್ಲಿ ಇರಿ ಎಂದು ಒಂದೂ ಮಾತು ಹೇಳಲಿಲ್ಲ, ಅವರು ಯಾಕೆ ಹೀಗೆ ಮಾಡಿದರೋ ಗೊತ್ತಿಲ್ಲ. ಬಸವರಾಜ ಬೊಮ್ಮಾಯಿ ಅವರೂ ನನ್ನನ್ನು ಸಂಪರ್ಕಿಸಿಲ್ಲ, ಬಿಜೆಪಿಯಲ್ಲೇ ಇರಿ ಎಂದು ಹೇಳಿದ್ದರೆ ನಾನು ಅಲ್ಲೇ ಇರುತ್ತಿದ್ದೆ. ಉದಾಸೀನತೆ ಮಾಡುವ ಪಕ್ಷದಲ್ಲಿ ಇದ್ದರೆ ಉಪಯೋಗ ಇಲ್ಲ ಎಂದು ಭಾವಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದರು.

ಈ ವೇಳೆ ಪರಶುರಾಮ ಅಗಡಿ, ಶಿವರಾಜ ಮತ್ತಿಹಳ್ಳಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!