ಅಧಿವೇಶನದಲ್ಲಿ ನೀರಾವರಿ ಬಗ್ಗೆ ಹೆಚ್ಚು ಮಾತನಾಡಿದ್ದೇನೆ: ಬಸವರಾಜ ರಾಯರಡ್ಡಿ

KannadaprabhaNewsNetwork |  
Published : Jan 09, 2026, 02:15 AM IST
ಯಲಬುರ್ಗಾ ತಾಲೂಕಿನ ಉಚ್ಚಲಕುಂಟಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಯಲಬುರ್ಗಾ ತಾಲೂಕಿನ ನಾನಾ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು, ಉದ್ಘಾಟನೆ ಮತ್ತು ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಮತ್ತು ಜನಸಂಪರ್ಕ ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಪಾಲ್ಗೊಂಡಿದ್ದರು.

ಯಲಬುರ್ಗಾ: ನೀರಾವರಿ ಯೋಜನೆ ಮತ್ತು ಸಮಸ್ಯೆಗಳ ಕುರಿತು ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ವಿಸ್ತಾರವಾಗಿ ಮಾತನಾಡಿದ್ದೇನೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಚಿಕ್ಕವಂಕಲಕುಂಟಾ, ಉಚ್ಚಲಕುಂಟಾ, ಬುಕನಟ್ಟಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು, ಉದ್ಘಾಟನೆ ಮತ್ತು ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಮತ್ತು ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ನೀರಾವರಿ ಅನುಷ್ಠಾನವು ಒಬ್ಬ ಶಾಸಕ, ಮಂತ್ರಿಯಿಂದ ಅಸಾಧ್ಯ. ಅದಕ್ಕೆ ಇಡೀ ಸರ್ಕಾರವೇ ಮನಸ್ಸು ಮಾಡಬೇಕು. ಆಲಮಟ್ಟಿ ಅಣೆಕಟ್ಟು ಎತ್ತರಿಸುವ ವಿಚಾರವಾಗಿ ಗೆಜೆಟ್ ಮಾಡಲು ಸಲಹೆ ನೀಡಲಾಗಿದೆ. ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗಿದೆ. ಇನ್ನೂ ೨೧ ಕೆರೆ ತುಂಬಿಸುವ ಕೆಲಸ ಮಾಡುತ್ತೇನೆ ಎಂದರು.

ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರು ಬದಲಾಯಿಸಿದ್ದು ತಪ್ಪು. ಕೇಂದ್ರವು ರಾಜ್ಯಕ್ಕೆ ಹಣ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಂಡನೆಯಾಗಲಿರುವ ಬಜೆಟ್‌ನ್ನು ಬರೆಯಲು ಸಿಎಂ ಸಿದ್ದರಾಮಯ್ಯ ನನಗೆ ಜವಾಬ್ದಾರಿ ವಹಿಸಿದ್ದಾರೆ ಎಂದರು.

ತಾಲೂಕಿನ ಚಿಕ್ಕವಂಕಲಕುಂಟಾ, ಉಚ್ಚಲಕುಂಟಾ, ಬುಕನಟ್ಟಿ, ತಿಪ್ಪನಾಳ, ಕಟಗಿಹಳ್ಳಿ, ಹಿರೇವಡ್ರಕಲ್, ಗಾಣಧಾಳ, ಮರಕಟ್, ಚೌಡಾಪುರ, ವನಜಭಾವಿ, ಗುಳೆ, ಚಿಕ್ಕಮನ್ನಾಪುರ, ಶಿಡ್ಲಭಾವಿ, ಕೃಷ್ಣಾಪುರ, ಬೋದೂರು, ಗುಂಟಮಡು ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು.

ತಹಸೀಲ್ದಾರ್ ಪ್ರಕಾಶ ನಾಶಿ, ತಾಪಂ ನೀಲಗಂಗಾ ಬಬಲಾದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಸುಧೀರ ಕೊರ್ಲಹಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಅಧಿಕಾರಿಗಳಾದ ಬಿ. ಮಲ್ಲಿಕಾರ್ಜುನ, ಬೆಟದೇಶ ಮಾಳೆಕೊಪ್ಪ, ಲಿಂಗನಗೌಡ ಪಾಟೀಲ್, ಪ್ರಮೋದ ತುಂಬಳ, ಮಹ್ಮದ್ ಖಲೀಮುದ್ದೀನ್, ಅಶೋಕ ಗೌಡರ, ಪಿಡಿಒ ಹನುಮಂತಪ್ಪ ರೇಣಿ, ಪ್ರಮುಖರಾದ ವೀರನಗೌಡ ಪಾಟೀಲ್, ಮಹೇಶ ಹಳ್ಳಿ, ಷಣ್ಮುಖಪ್ಪ ಬಳ್ಳಾರಿ, ರೇವಣಪ್ಪ ಸಂಗಟಿ, ರಾಮಣ್ಣ ಸಾಲಭಾವಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರಡ್ಡಿ, ಅಪ್ಪಣ್ಣ ಜೋಶಿ, ರುದ್ರಪ್ಪ ಮರಕಟ್, ಸುಭಾಷ್ ಜಿರ್ಲಿ, ನಾಗರಾಜ ನವಲಹಳ್ಳಿ, ಮಲ್ಲಿಕಾರ್ಜುನ ಜಕ್ಕಲಿ, ಹನುಮಂತಪ್ಪ ಹುಣಸಿಹಾಳ, ಶರಣಗೌಡ ಬಸಾಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ