)
ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ, ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಜವಾಬ್ದಾರಿ ಹೊರಿಸಿತ್ತು. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ ಎಂದರು.
1990 ರಲ್ಲಿ ಕೇವಲ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿತ್ತು. ಇದೀಗ 1.24 ಎಕರೆ ಪ್ರದೇಶಕ್ಕೆ ಅಡಿಕೆ ಬೆಳೆ ವಿಸ್ತರಿಸಿದೆ. ಎಸ್.ಬಂಗಾರಪ್ಪ ಉಚಿತ ವಿದ್ಯುತ್ ನೀಡಿದ್ದರಿಂದ ಅಡಕೆ ಬೆಳೆಗಾರರಿಗೆ ವರದಾನವಾಗಿದೆ. 36 ವರ್ಷದಲ್ಲಿ 10 ಪಟ್ಟು ತೋಟದ ಅಭಿವೃದ್ಧಿಯಾಗಿದೆ ಎಂದು ತಿಳಿಸಿದರು.ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಗ್ರಾಪಂ ಮೀಸಲಾತಿ ಮರು ಪರಿಶೀಲಿಸುವ ಅಗತ್ಯ ಇದೆ. ಕೆಲವು ಸಮುದಾಯ ಇಲ್ಲದಿದ್ದರು ಆ ಭಾಗಕ್ಕೆ ಮೀಸಲಾತಿ ನೀಡಿದೆ. ಅದನ್ನು ಸರಿಪಡಿಸುವ ಅಗತ್ಯ ಇದೆ. ಬಾಳೇಬೈಲಿನಲ್ಲಿ ಶಾಸಕರ ಆಪ್ತ ಬಡವರ ಮನೆ ನೆಲಸಮ ಮಾಡಲು ಹೊಂಚು ಹಾಕುತ್ತಿದ್ದಾರೆ. ನಮಗೆ ತೊಂದರೆ ಕೊಡುವ ಅವಶ್ಯಕತೆ ಇಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿ ಜಾರಿಗೆ ನಮ್ಮ ವಿರೋಧ ಇದೆ. ಅದಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಅವೈಜ್ಞಾನಿಕ ಮೀಸಲಾತಿಯನ್ನು ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದರು.