ಬೊಮ್ಮಾಯಿ ಪರ ಪ್ರಚಾರದಲ್ಲಿ ತೊಡಗುತ್ತೇನೆ: ಸಂಸದ ಶಿವಕುಮಾರ ಉದಾಸಿ

KannadaprabhaNewsNetwork |  
Published : Apr 21, 2024, 02:25 AM IST
ಫೋಟೋ : ಶಿವಕುಮಾರ ಉದಾಸಿ | Kannada Prabha

ಸಾರಾಂಶ

ಮತದಾರರನ್ನು ಮನವೊಲಿಸಲಾಗದ ಕಾಂಗ್ರೆಸ್ಸಿಗರು ಗೊಂದಲಕ್ಕೀಡುಮಾಡಿ ಮತ ಕಬಳಿಸುವ ಹುನ್ನಾರಕ್ಕೆ ಕೈ ಹಾಕುತ್ತಾರೆ ಎಂಬುದನ್ನು ಎಚ್ಚರಿಕೆಯಿಂದ ಗಮನಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಕನ್ನಡಪ್ರಭ ವಾರ್ತೆ ಹಾನಗಲ್ಲ

ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಹಾವೇರಿ-ಗದಗ ಕ್ಷೇತ್ರದಾದ್ಯಂತ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಸಂಸದ ಶಿವಕುಮಾರ ಉದಾಸಿ ಸ್ಪಷ್ಟಪಡಿಸಿದರು.

ಚುನಾವಣಾ ರಾಜಕೀಯದಿಂದ ನಿವೃತ್ತನಾಗುವುದಾಗಿ ಘೋಷಿಸಿದ ಬಳಿಕ ನೇಪತ್ಯಕ್ಕೆ ಸರಿದಿದ್ದ ಅವರು ಶನಿವಾರ ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಚಾರದಲ್ಲಿ ಭಾಗವಹಿಸುವುದಕ್ಕಾಗಿಯೇ ಬಂದಿದ್ದೇನೆ. ಇಲ್ಲಿಯೇ ಇರುತ್ತೇನೆ. ಬೊಮ್ಮಾಯಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಮತದಾರರನ್ನು ಮನವೊಲಿಸಲಾಗದ ಕಾಂಗ್ರೆಸ್ಸಿಗರು ಗೊಂದಲಕ್ಕೀಡುಮಾಡಿ ಮತ ಕಬಳಿಸುವ ಹುನ್ನಾರಕ್ಕೆ ಕೈ ಹಾಕುತ್ತಾರೆ ಎಂಬುದನ್ನು ಎಚ್ಚರಿಕೆಯಿಂದ ಗಮನಿಸಬೇಕು. ಕೇಂದ್ರ ಸರಕಾರದ ಆಡಳಿತ ಪರ ಅಲೆ ಇದೆ, ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಬಸವರಾಜ ಬೊಮ್ಮಾಯಿ ಅತ್ಯಧಿಕ ಮತಗಳಿಂದ ಗೆಲ್ಲುತ್ತಾರೆ ಎಂದು ಉದಾಸಿ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ. ಸಕ್ರೀಯ ರಾಜಕಾರಣದಿಂದ ಮುಕ್ತನಾಗಿದ್ದೇನೆ. ನನಗೆ ಯಾವುದೇ ಪದವಿ ಬೇಕಾಗಿಲ್ಲ. ಆದರೆ, ಪಕ್ಷ ಅಭಿವೃದ್ಧಿಗಾಗಿ ಹಾಗೂ ಯೋಜನೆಯನ್ನು ರೂಪಿಸಲು ಅವಕಾಶ ಕೊಟ್ಟರೆ ಖಂಡಿತ ಉತ್ತಮ ಅಧ್ಯಯನದ ಮೂಲಕ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ನನಗೆ ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಇದೆ ಎಂದು ಹೇಳಿದರು.

ಹಾವೇರಿ ಗದಗ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ನಾಲ್ಕು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸಿದೆ. ಐದನೇ ಗೆಲುವು ನಮ್ಮದೇ. ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ, ನೀರಾವರಿ, ಗೃಹ ಸಚಿವರಾಗಿ ಆಡಳಿತದ ಅನುಭವವಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ