ಮತ್ತೆ ರಾಮನಗರದಿಂದಲೇ ಚುನಾವಣೆಗೆ ನಿಲ್ಲುವೆ: ನಿಖಿಲ್‌

KannadaprabhaNewsNetwork |  
Published : Jun 25, 2025, 11:47 PM IST
25ಕೆಆರ್ ಎಂಎನ್ 6.ಜೆಪಿಜಿರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನವನ್ನು ದೀಪ ಬೆಳಗುವ ಮೂಲಕ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. | Kannada Prabha

ಸಾರಾಂಶ

‘ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ನಾನು ಪಲಾಯನ ಮಾಡುವುದಿಲ್ಲ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಗರ‘ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ನಾನು ಪಲಾಯನ ಮಾಡುವುದಿಲ್ಲ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮ ಕುಟುಂಬವನ್ನು ಪ್ರೀತಿಯಿಂದ ಹರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.ಚುನಾವಣೆಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಆದರೆ, ಕ್ಷೇತ್ರದ ಜನರ ಬಾಂಧವ್ಯ ಮುಖ್ಯ. ನಾನು ಸ್ಪರ್ಧಿಸಿದ ಮೂರು ಚುನಾವಣೆಗಳಲ್ಲೂ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾದೆ. ನನ್ನ ಸೋಲಿನ ಒಳ ಮರ್ಮ ರಾಜ್ಯ ದ ಜನರಿಗೆ ಗೊತ್ತಿಲ್ಲ. ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರ ಕ್ಷೇತ್ರದಿಂದಲೇ ಸ್ವರ್ಧೆ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಸಂದೇಹ ಬೇಡ. ನನ್ನಿಂದ ಏನಾದರು ತಪ್ಪಾಗಿದ್ದರೆ ಮನ್ನಿಸಿ ಎಂದು ಕ್ಷಮೆಯಾಚಿಸಿದರು.

ಈ ಕ್ಷೇತ್ರದ ಜನ ಕುಮಾರಸ್ವಾಮಿ ಅವರನ್ನು ಹೆಗಲ ಮೇಲೆ ಹೊತ್ತು ಗೆಲ್ಲಿಸಿದ್ದೀರಿ. ನಾನು ಪಲಾಯನ ಮಾಡದೆ ನನ್ನ ಕುಟುಂಬದ ಮೇಲಿರುವ ನಿಮ್ಮ ಋಣವನ್ನು ತೀರಿಸುತ್ತೇನೆ. ನಾನು ರಾಜ್ಯಾಧ್ಯಕ್ಷನಾಗಲು ಈ ಕಾರ್ಯಕ್ರಮ ಎನ್ನುತ್ತಿದ್ದಾರೆ. ಆದರೆ ಯಾವುದೇ ಹುದ್ದೆಯ ಆಸೆ ನನಗಿಲ್ಲ. ನಾಡಿನ ಜನರು ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ನಿರ್ಧಾರ ಮಾಡಿದ್ದಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಏನೂ ಮಾಡಿಲ್ಲ ಎಂಬುದಾಗಿ ಪ್ರತಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ತಂಬಾಕು ಬೆಳೆಗಾರರು, ರೇಷ್ಮೆ ಬೆಳೆಗಾರರ ನೆರವಿಗೆ ಧಾವಿಸಿದ್ದಾರೆ. ಕೊಬ್ಬರಿ, ಮಾವಿಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಮೂಲಕ ನ್ಯಾಯ ಕೊಡಿಸಿದ್ದಾರೆ. ಇದು ಡಿ.ಕೆ.ಸಹೋದರರಿಂದ ಸಾಧ್ಯನಾ? ಎಂದು ನಿಖಿಲ್ ತಿರುಗೇಟು ನೀಡಿದರು.ಬಾಕ್ಸ್‌:

ರಾಮನ ಹೆಸರನ್ನು ಅಳಿಸಿದ

ಕಾಂಗ್ರೆಸ್ ಧೂಳಿಪಟವಾಗಲಿದೆ

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನ ಹೆಸರು ಅಳಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರು ರಾಮನಗರ ಎಂದು ಹೆಸರು ಇಟ್ಟಿದ್ದರು. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಮಾಡಿದರು. ಆದರೆ, ಕಾಂಗ್ರೆಸ್ ನವರು ರಾಮನಗರ ಜಿಲ್ಲೆಯ ಅಸ್ಮಿತೆಯನ್ನು ಅಳಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಹೆಸರು ಬದಲಾವಣೆ ಮಾಡುವುದರಿಂದ ಅಭಿವೃದ್ಧಿ ಆಗಲ್ಲ. ಜಿಲ್ಲೆಯ ಜನರ ಹೃದಯದಲ್ಲಿ ರಾಮನಗರ ಎನ್ನುವ ಹೆಸರು ಶಾಶ್ವತವಾಗಿ ಉಳಿದಿದೆ ‘ಮಿಸ್ಟರ್ ಡಿ.ಕೆ.ಶಿವಕುಮಾರ್’ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ