ಕನ್ನಡಪ್ರಭ ವಾರ್ತೆ ಮಾಗಡಿ
ವೀರೇಗೌಡನದೊಡ್ಡಿ ವಿಎಸ್‌ಎಸ್‌ಎನ್‌ಗೆ ಅಧ್ಯಕ್ಷರಾಗಿದ್ದ ಲೋಕೇಶ್ ಅವರು ರಾಜೀನಾಮೆ ನೀಡಿದ್ದು, ಇಂದು ಅಧ್ಯಕ್ಷರ ಆಯ್ಕೆ ಚುನಾವನೆ ನಿಗದಿಯಾಗಿದ್ದು, ರವಿಕುಮಾರ್ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ರವಿಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಮಹೇಶ್ ಘೋಷಿಸಿದರು.
ನೂತನ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಸಂಘದ ನಿರ್ದೇಶಕರು ಒಗ್ಗಟ್ಟಿನಿಂದ ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದು ತುಂಬಾ ಸಂತೋಷ ತಂದಿದೆ. ಈ ಜವಾಬ್ದಾರಿಯನ್ನು ಹುದ್ದೆ ಎಂದು ಭಾವಿಸದೆ ಸೇವೆಯ ಅವಕಾಶವೆಂದು ಪರಿಗಣಿಸಿ ಕಾರ್ಯನಿರ್ವಹಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ರವಿಕುಮಾರ್ ತಿಳಿಸಿದರು.ಸಹಕಾರ ಕ್ಷೇತ್ರ ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದ್ದು, ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಮಹತ್ವದ ಅವಕಾಶ ಇಲ್ಲಿದೆ. ಈ ನಿಟ್ಟಿನಲ್ಲಿ ಸಂಘದ ಮೂಲಕ ರೈತರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಘದ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿರುವ ಬಾಲಕೃಷ್ಣ ಸೇರಿದಂತೆ ಸಂಘದ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಜುಟ್ಟನಹಳ್ಳಿ ವಿಎಸ್‌ಎಸ್‌ಎನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಜೆ.ಪಿ. ಚಂದ್ರೇಗೌಡ, ನಿರ್ದೇಶಕರಾದ ಶಿವಣ್ಣ, ಕೃಷ್ಣಪ್ಪ, ನರಸಿಂಹಮೂರ್ತಿ, ವಿ.ಎಸ್.ಉಮೇಶ್, ಜಯರಾಮ, ಪುಟ್ಟತಾಯಮ್ಮ, ಗಂಗಮ್ಮ, ವೆಂಕಟೇಶ್, ನಾಗರಾಜ್, ಮುಖಂಡರಾದ ವಿ.ಆರ್.ಪರಶಿವಮೂರ್ತಿ, ಜಯಣ್ಣ, ಪ್ರಕಾಶ್, ಲೋಕೇಶ್, ನಾಗೇಶ್, ಮಹೇಶ್, ಪ್ಯಾರೇಜಾನ್, ನರಸಿಂಹಮೂರ್ತಿ, ಕೃಷ್ಣ, ಸುನೀಲ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.