ಕನ್ನಡಪ್ರಭ ವಾರ್ತೆ ಮದ್ದೂರು
ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜಕಾರಣ ಎಂಬುದು ಸೇವೆಯಾಗಿದೆ. ರಾಜಕಾರಣಿಗಳು ಸೇವಕರ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತರೆ ರಾಜ್ಯದ ಪಾಲಿಗೆ ಐತಿಹಾಸಿಕ ಕಾರ್ಯವಾಗಲಿದೆ. ಇದರಿಂದ ರಾಜ್ಯದ ರೈತರ ಅಭಿವೃದ್ಧಿಗೆ ಹೆಚ್ಚಿನ ಅನುಕೂಲ. ಯೋಜನೆಗೆ ಅನುಮೋದನೆ ದೊರಕಿಸಲು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.ಕೊಪ್ಪ ಹೋಬಳಿಯ ಎಲ್ಲಾ ಗ್ರಾಪಂಗಳಿಗೆ ನೀರು ತಲುಪಿಸುವ ನಿಟ್ಟಿನಲ್ಲಿ ವಿಸಿ ನಾಲೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಈ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮಳವಳ್ಳಿ ಹಾಗೂ ತುಮಕೂರು ಭಾಗದ ಪ್ರದೇಶಗಳಿಗೂ ನೀರು ಪೂರೈಸುವ ಕುರಿತು ಯೋಜನೆ ರೂಪಿಸುವ ಚಿಂತನೆ ಇದೆ ಎಂದರು.
ಮಹಿಳಾ ಸ್ವಸಹಾಯ ಸಂಘಗಳಿಗೆ ಪ್ರಸ್ತುತ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸಾಲದ ಮಿತಿ 10 ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಂತರ ನಮ್ಮ ಭಾಗದಲ್ಲಿ ಅತಿ ಹೆಚ್ಚು ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಎನ್.ಚಲುವರಾಯಸ್ವಾಮಿ. 8 ಗ್ರಾಪಂ ವ್ಯಾಪ್ತಿಯಲ್ಲಿ 200 ಕೋಟಿಗೂ ಹೆಚ್ಚಿನ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.