ಪದವೀಧರರ ಶ್ರೆಯೋಭಿವೃದ್ಧಿಗೆ ಹೋರಾಡುವೆ: ಪ್ರೊ. ಎಸ್.ವಿ. ಸಂಕನೂರ

KannadaprabhaNewsNetwork |  
Published : Jul 13, 2026, 01:15 AM IST
ಬಿಜೆಪಿ ಕಾರ್ಯಕರ್ತರೊಂದಿಗೆ ವಿಧಾನಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರಿ ನೌಕರರಿಗೆ ಇರುವ ಒಪಿಎಸ್ ಸೌಲಭ್ಯವನ್ನು ಖಾಸಗಿ ಶಾಲಾ ಕಾಲೇಜುಗಳ ನೌಕರರಿಗೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಮುಂದಿನ ದಿನಗಳಲ್ಲಿ ಪದವಿಧರರ ಸಮಸ್ಯಗೆಳಿಗೆ ಸ್ಪಂದಿಸುವ ಕಾರ್ಯ ಮಾಡುವುದು ನಮ್ಮ ಗುರಿಯಾಗಿದೆ.

ಲಕ್ಷ್ಮೇಶ್ವರ: ಪದವೀಧರರ ಕಷ್ಟಗಳಿಗೆ ಶ್ರಮಿಸುವಲ್ಲಿ ಸದಾ ಹೋರಾಡುತ್ತಿದ್ದೇವೆ. ಕಳೆದ ೧೨ ವರ್ಷಗಳಿಂದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಮೇಳ ಏರ್ಪಡಿಸಿ ಉದ್ಯೋಗ ಕೊಡಿಸುವ ಕಾರ್ಯ ಮಾಡಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿ, ಪದವೀಧರರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಹೋರಾಡಿ ಅವರಿಗೆ ದೊರೆಯಬೇಕಾದ ಸೌಲಭ್ಯ ಕೊಡಿಸುವಲ್ಲಿ ವಿಧಾನಪರಿಷತ್ತಿನಲ್ಲಿ ಮಾತನಾಡಿದ್ದೇನೆ. ಸರ್ಕಾರ ವಿವಿಧ ಇಲಾಖೆಗಳಲ್ಲಿ ಇರುವ ಸುಮಾರು ೩ ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳನ್ನು ತುಂಬುವ ಮೂಲಕ ನಿರುದ್ಯೋಗಿ ಪದವೀಧರರ ಕುಟುಂಬಗಳಿಗೆ ಉದ್ಯೋಗ ನೀಡುವ ಕಾರ್ಯ ಮಾಡುವಂತೆ ಒತ್ತಾಯಿಸಿದ್ದೇನೆ.

ಸರ್ಕಾರ ಇದೀಗ ೫೪ ಸಾವಿರ ಹುದ್ದೆಗಳ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದೆ. ನಿರುದ್ಯೋಗಿಗಳಿಗಾಗಿ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಿಲ್ಲಾ ಕೇಂದ್ರಗಳಲ್ಲಿ ಹಲವು ಉದ್ಯೋಗ ಮೇಳ ನಡೆಸುವ ಮೂಲಕ ಸಾವಿರಾರು ಪದವೀಧರರಿಗೆ ಉದ್ಯೋಗ ದೊರೆಯುವಂತೆ ಮಾಡಿದ್ದೇವೆ ಎಂದರು.

ಸರ್ಕಾರಿ ನೌಕರರಿಗೆ ಇರುವ ಒಪಿಎಸ್ ಸೌಲಭ್ಯವನ್ನು ಖಾಸಗಿ ಶಾಲಾ ಕಾಲೇಜುಗಳ ನೌಕರರಿಗೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಮುಂದಿನ ದಿನಗಳಲ್ಲಿ ಪದವಿಧರರ ಸಮಸ್ಯಗೆಳಿಗೆ ಸ್ಪಂದಿಸುವ ಕಾರ್ಯ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಈ ವೇಳೆ ನಿವೃತ್ತ ಶಿಕ್ಷಕರಾದ ಎಸ್.ಎಸ್. ನಾಗಲೋಟಿ, ಪೂರ್ಣಾಜಿ ಕರಾಟೆ, ಕೋಟಿಮಠ, ಎಸ್.ಎಸ್. ಪೂಜಾರ, ಎಸ್.ಎನ್. ಮಳಲಿ, ಗಂಗಾಧರ ಮೆಣಸಿನಕಾಯಿ, ಅನಿಲ ಮುಳಗುಂದ, ಅಶೋಕ ಶಿರಹಟ್ಟಿ, ಸಂತೋಷ ಜಾವೂರ, ಈರಣ್ಣ ಅಕ್ಕೂರ, ಕುಬೇರಪ್ಪ ಸೇರಿದಂತೆ ಅನೇಕರು ಇದ್ದರು. ಪರಿಸರ ಸಂರಕ್ಷಣೆ ಅವಶ್ಯ

ಗದಗ: ಪರಿಸರ ಸಂರಕ್ಷಣೆ ಎಂದಿಗಿಂತ ಇಂದು ಅವಶ್ಯವಿದೆ. ಕೇವಲ ಸಸಿಗಳನ್ನು ನೆಡುವುದು ಮುಖ್ಯವಲ್ಲ, ಅದು ಸಾಧನೆಯೂ ಅಲ್ಲ. ನೆಟ್ಟ ಸಸಿಗಳನ್ನು ಸಂರಕ್ಷಿಸಿ ನೀರುಣಿಸಿ ಬೆಳೆಸುವುದು ಅಷ್ಟೇ ಮುಖ್ಯ ಎಂದು ರೋಟರಿ ಕ್ಲಬ್‌ನ ಅಧ್ಯಕ್ಷ ಡಾ. ಪ್ರದೀಪ ಉಗಲಾಟ ಹೇಳಿದರು.ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ರೋಟರಿ ಕ್ಲಬ್‌ನಿಂದ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಆರೋಗ್ಯಕರ ಪರಿಸರವೇ ಮಾನವನ ಬದುಕಿನ ಮೂಲಾಧಾರವಾಗಿದೆ. ಶುದ್ಧ ಗಾಳಿ, ಶುದ್ಧ ನೀರು ಹಾಗೂ ಪೌಷ್ಟಿಕ ಆಹಾರಕ್ಕಾಗಿ ಪರಿಸರ ಸಂರಕ್ಷಣೆ ಅನಿವಾರ್ಯವಾಗಿದ್ದು, ಪರಿಸರ ಸಂರಕ್ಷಣೆ ಮತ್ತು ಪ್ರಕೃತಿ ಸಂಪನ್ಮೂಲಗಳ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದರು.ಶಹರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಎಸ್.ಪಿ. ಪ್ರಭಯ್ಯನಮಠ ಮಾತನಾಡಿದರು. ಈ ವೇಳೆ ರೋಟರಿ ಕ್ಲಬ್‌ನ ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ರೋಟರಿ ವೆಲ್‌ಫೇರ್ ಅಧ್ಯಕ್ಷ ಶ್ರೀಧರ ಸುಲ್ತಾನಪೂರ, ಎಸ್.ವಿ.ಕುಂಬಾರ, ಶರಣಪ್ಪ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾನಗರ ಪಾಲಿಕೆಯ ಆರಂಭ ಶೂರತ್ವ; ಮತ್ತೆ ಫುಟ್‌ಪಾತ್ ಅತಿಕ್ರಮಣ ಮಾಡಿದ ವ್ಯಾಪಾರಿಗಳು
ವರ್ತಮಾನದ ಅರಿವಿನಿಂದ ವ್ಯಕ್ತಿತ್ವ ವಿಕಸನ: ಯಮುನಾ ಶ್ರೀನಿಧಿ