ಕನ್ನಡಪ್ರಭ ವಾರ್ತೆ ಮಂಡ್ಯ/ಮದ್ದೂರು
ಗಣೇಶನ ಗಲಾಟೆ ನಡೆದ ಮದ್ದೂರಿಗೆ ಗುರುವಾರ ಭೇಟಿ ನೀಡಿದ್ದ ಅವರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸದಿಂದ ನುಡಿದರು.
ಹಿಂದೂಗಳ ಪರವಾಗಿ ಹೋರಾಡುವವನು ಮುಂದಿನ ಕರ್ನಾಟಕದ ಸಿಎಂ. ಮುಂದಿನ ಸಿಎಂ ಜೆಸಿಬಿ ಸಿಎಂ. ನಮ್ಮ ಸರ್ಕಾರ ಅಧಿಕಾರಕ್ಕೆ ಅಕ್ರಮವಾಗಿ ಕಟ್ಟಿದ ಮಸೀದಿಗಳನ್ನೆಲ್ಲಾ ಕೆಡವಲಾಗುವುದು. ಹಿಂದೂಗಳೆಲ್ಲಾ ಜಾತಿ ರಾಜಕಾರಣ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿ ಎಂದರು.ಮೃತರ ಮೆರವಣಿಗೆ ವೇಳೆ ತಮಟೆ ಬಾರಿಸಲು ಮಸೀದಿ ಮುಂದೆ ಬಿಡೋಲ್ಲ. ನಮ್ಮ ಸರ್ಕಾರ ಬಂದರೆ ಮಸೀದಿ ಮುಂದೆ ಒಂದು ಗಂಟೆ ಡ್ಯಾನ್ಸ್ ಮಾಡಲು ಅವಕಾಶ ಕೊಡುತ್ತೇನೆ. ೨೦೨೮ಕ್ಕೆ ಎಲ್ಲರೂ ವಿಧಾನಸೌಧದ ಮುಂದೆ ಭಗವಧ್ವಜ ತರ್ತೀರಾ? ನನ್ನನ್ನು ಕರ್ನಾಟಕ ಸಿಎಂ ಮಾಡ್ರೀರಾ ಎಂದು ನೆರೆದಿದ್ದ ಸಾವಿರಾರು ಹಿಂದೂ ಕಾರ್ಯಕರ್ತರನ್ನು ಪ್ರಶ್ನಿಸಿದರು.ನಾನು ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಾಡುವವರನ್ನು ಜೈಲಿಗಟ್ಟುತ್ತೇನೆ. ವಕ್ಫ್‌ಗೆ ನೀಡುವ ಅನುದಾನವನ್ನು ಗೋರಕ್ಷಕರಿಗೆ ನೀಡುತ್ತೇನೆ. ಹಿಂದೂಗಳ ಹಣ ಹಿಂದೂಗಳ ದೇವಾಲಯ ಅಭಿವೃದ್ಧಿಗೆ ಮಾತ್ರ ಮೀಸಲಿರಬೇಕು. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನಕ್ಕೆ, ಪಾಕಿಸ್ತಾನದಲ್ಲಿರುವ ಹಿಂದೂಗಳನ್ನು ಭಾರತಕ್ಕೆ ಕರೆತರಬೇಕು ಎಂದಿದ್ದರು ಅಂಬೇಡ್ಕರ್. ಮದ್ದೂರಿನ ಘಟನೆ ನೋಡಿದರೆ ಅಂಬೇಡ್ಕರ್ ಹೇಳಿದ್ದು ಸತ್ಯ ಎನಿಸುತ್ತದೆ.
ಮದ್ದೂರಿಗೆ ಆಗಮಿಸಿದ ಹಿಂದೂಫೈರ್ ಬ್ರಾಂಡ್ ಬಸವನಗೌಡ ಪಾಟೀಲ ಯತ್ನಾಳ್‌ಗೆ ಹಿಂದೂ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಪಟ್ಟಣಕ್ಕೆ ಯತ್ನಾಳ್ ಆಗಮಿಸುತ್ತಿದ್ದಂತೆ ಹಿಂದೂ ಕಾರ್ಯಕರ್ತರಿಂದ ಜೈಕಾರ ಮೊಳಗಿಸಿದರು. ಸ್ವಾಗತಕ್ಕೆ ಸಾವಿರರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದರು.