ದಿ.ಉಮೇಶ ಉಕ ಸಿಎಂ ಕನಸು ಈಡೇರಿಸುತ್ತೇನೆ

KannadaprabhaNewsNetwork | Published : Apr 30, 2024 2:04 AM

ಸಾರಾಂಶ

ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಕನಸಿನಂತೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲು ಈ ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಸಂಕೇಶ್ವರಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಕನಸಿನಂತೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲು ಈ ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬ ಉಮೇಶ ಕತ್ತಿ ಕನಸನ್ನು ಮುಖ್ಯಮಂತ್ರಿಯಾಗಿ ನಾನು ಈಡೇರಿಸುತ್ತೇನೆ ಎಂದರು.

ಸಣ್ಣಪುಟ್ಟ ಭಿನಾಭಿಪ್ರಾಯ ಬದಿಗೊತ್ತಿ ದೇಶದ ರಕ್ಷಣೆ ಹಾಗೂ ಮಕ್ಕಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಬಿಜೆಪಿಗೆ ಮತಚಲಾಯಿಸಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಕೋರಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಡತನ ನಿರ್ಮೂಲನೆಗಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಭಾರತದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ್ದು, ಸದೃಢ ಭಾರತಕ್ಕಾಗಿ ಬಿಜೆಪಿಗೆ ಮತ ಚಲಾಯಿಸಿ ನನ್ನನ್ನು ಆಯ್ಕೆಗೊಳಿಸಬೇಕು ಎಂದು ಮನವಿ ಮಾಡಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಆಯ್ಕೆಗೊಳಿಸುವ ಮೂಲಕ ಅವರ ಪ್ರಾಮಾಣಿಕ ಸೇವೆಗೆ ಬೆಂಬಲ ನೀಡಬೇಕಾಗಿದೆ ಎಂದರು.

ಶಾಸಕ ನಿಖಿಲ್ ಕತ್ತಿ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದ್ದು, ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು. ಕಳೆದ ಬಾರಿಗಿಂತ ಹೆಚ್ಚಿನ ಮತಗಳನ್ನು ಕ್ಷೇತ್ರದಲ್ಲಿ ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಚಿಕ್ಕಪ್ಪ ರಮೇಶ ಕತ್ತಿ ಅವರಿಗೆ ಟಿಕೆಟ್ ಸಿಗದೇ ಇರುವುದಕ್ಕೆ ಮನಸ್ಸಿಗೆ ನೋವಾಗಿರುವುದು ನಿಜ. ಅದನ್ನು ಪಕ್ಷ ಮುಂದಿನ ದಿನಗಳಲ್ಲಿ ಸರಿಪಡಿಸಲಿದೇ ಎಂಬ ಆಶಾವಾದವಿದೆ. ದೇಶದ ಅಭಿವೃದ್ಧಿಗೆ ಎಲ್ಲ ಮುನಿಸು ಮರೆತು ಮೋದಿ ಕೈ ಬಲಪಡಿಸಲು ನಾವು ಸಜ್ಜಾಗಿದ್ದೇವೆ ತಿಳಿಸಿದರು.

ಸಂಗಮ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಗುರುರಾಜ ಕುಲಕರ್ಣಿ, ರಾಚಯ್ಯ ಹಿರೇಮಠ ಸೇರಿದಂತೆ ಇತರರು ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಡಾ.ರಾಜೇಶ ನೇರ್ಲಿ, ಸತ್ಯಪ್ಪ ನಾಯಿಕ, ಜಿ.ಎನ್.ಕ್ವಳ್ಳಿ, ಸಂಜಯ ಶಿರಕೋಳಿ, ಶಿವಾನಂದ ಮುಡಸಿ, ದುಂಡಪ್ಪ ಬೆಂಡವಾಡೆ, ಮಹೇಶ ದೇಸಾಯಿ, ಪವನ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕಾಂಗ್ರೆಸ್ ಕೇವಲ ಮತಬ್ಯಾಂಕ್‌ ಸಲುವಾಗಿ ಮುಸ್ಲಿಂ ಸಮುದಾಯವನ್ನು ಇನ್ನಿತರ ಸಮುದಾಯಗಳ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದು, ದೇಶದಲ್ಲಿ 51 ಹಿಂದು ವಿರೋಧಿ ಪಕ್ಷವಾಗಿ ಕೆಲಸ ಮಾಡುತ್ತ ಬಂದಿದ್ದು, ಇತ್ತೀಚಿಗೆ ಶಿವಸೇನೆ ಸೇರಿ 52 ಪಕ್ಷಗಳಾಗಿವೆ. ದೇಶದಲ್ಲಿ ಹಿಂದುತ್ವದ ರಕ್ಷಣೆಗಿರುವ ಏಕೈಕ ಪಕ್ಷ ಬಿಜೆಪಿ.

-ಬಸನಗೌಡ ಪಾಟೀಲ ಯತ್ನಾಳ, ಶಾಸಕ.

Share this article