ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜನೆ ಮಾಡಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅವರು ಜಿಲ್ಲೆಗೆ ಬಂದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿ ಈ ಹಿಂದೆ ನಾನು ಪಡೆದ ಮತಗಳಿಗಿಂತ ಹೆಚ್ಚಿನ ಮತಗಳಿಂದ ಜಯಗಳಿಸುವಂತೆ ಮಾಡಿ ದೊಡ್ಡವರ (ದೇವೇಗೌಡರು) ಗೆಲುವಿಗೆ ತನ್ನ ಅಳಿಲು ಸೇವೆ ಮಾಡುವುದಾಗಿ ಪ್ರಜ್ವಲ್ ಹೇಳಿದರು.
ಚುನಾವಣೆ ಮತ್ತು ಚುನಾಯಿತ ಜನಪ್ರತಿನಿಧಿಗಳು ರಾಜಕೀಯ ಹೊರತಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕಿದ್ದು, ರಾಜ್ಯದಲ್ಲಿ ರೈತರು ಪ್ರಮುಖವಾಗಿ ನಾಲ್ಕು ಸಂಕಷ್ಟಗಳಲ್ಲಿ ಸಿಲುಕಿದ್ದು, ತೀವ್ರ ಬರಗಾಲ, ವಿದ್ಯುತ್ ಪೂರೈಕೆ ಇಲ್ಲ, ಟಿಸಿಗಾಗಿ ಹಣ ಕಟ್ಟಿದ್ದರೂ ಟಿಸಿ ಪೂರೈಕೆಯಲ್ಲಿ ವ್ಯತ್ಯಯ ಮತ್ತು ಕಂದಾಯ ಇಲಾಖೆಯಲ್ಲಿ ದುರಸ್ತಿ ದೊರೆಯದೇ ಅವರದೇ ಜಮೀನಿಗೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.೧.೫೭ ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆ ಮಾಡಿದ ರೈತರು ತೀವ್ರ ಬರಗಾಲದಿಂದ ಫಸಲು ಕೈ ಸೇರದೇ ೩ ಸಾವಿರ ಕೋಟಿ ರು. ನಷ್ಟ ಅನುಭವಿಸಿದ್ದಾರೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ೩೫೭ ಗ್ರಾಮ ಪಂಚಾಯತಿಗಳಲ್ಲಿ ೨೧೭ ಗ್ರಾ.ಪಂ.ಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆಗಳ ಕುರಿತು ಅವರಲ್ಲಿ ಚರ್ಚಿಸಿದಾಗ ೨೦ ಸಾವಿರ ರು. ಕಟ್ಟಿ ವರ್ಷಗಳು ಕಳೆದರೂ ಇನ್ನೂ ಟಿಸಿಗಳನ್ನು ಸರ್ಕಾರ ಪೂರೈಸಿಲ್ಲ. ಈ ರೀತಿಯ ಸಮಸ್ಯೆಗಳ ಕುರಿತಂತೆ ಸ್ಪಂದಿಸುವಂತೆ ಒತ್ತಾಯ ಮಾಡಿದರೆ, ಸರ್ಕಾರದಲ್ಲಿ ಬಜೆಟ್ ಇಲ್ಲವೆಂದು ಕೇಂದ್ರ ಸರ್ಕಾರದ ಬಗ್ಗೆ ಬೆಟ್ಟು ಮಾಡಿ ತೋರಿಸುವ ಸರ್ಕಾರದ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಕೈಚೆಲ್ಲಿ ಕುಳಿತಿರುವ ಸರ್ಕಾರದ ಬಗ್ಗೆ ಗ್ರಾ.ಪಂ.ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರ ಕಷ್ಟಕಂಡು ಹೊಟ್ಟೆ ಉರಿಯುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.
ಜನಪ್ರತಿನಿಧಿಗೆ ರಾಜಕೀಯ ಒಂದೆಡೆಯಾದರೇ ದೊರೆತ ಅವಕಾಶವನ್ನು ಬಳಸಿಕೊಂಡು ರೈತರ ಸಮಸ್ಯೆಗೆ ಸ್ಪಂದಿಸುವ ಮತ್ತು ಜಿಲ್ಲೆಯ ಪ್ರಗತಿಗೆ ಕೈಗೊಳ್ಳಬೇಕಾದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಅತ್ಯವಶ್ಯವೆಂದು ತಿಳಿಸಿ, ಶಾಸಕ ಎಚ್.ಡಿ. ರೇವಣ್ಣ ಅವರ ಅಧಿಕಾರದ ಅವಧಿಯಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣ ಮತ್ತು ಕೋವಿಡ್ ಭೀಕರತೆ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಿಂದಾದ ಪ್ರಯೋಜನ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನರು ಅನುಭವಿಸಿದ ಕಷ್ಟ ಮತ್ತು ಹಣ ವ್ಯಯದ ಬಗ್ಗೆ ಮತ್ತು ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಾಸಂಗದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.