ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಜಿ.ಹೆಚ್.ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆ
ಜನತೆ ಮತ್ತು ಕಾರ್ಯಕರ್ತರ ನಂಬಿಕೆಯನ್ನು ಪ್ರಾಮಾಣಿಕವಾಗಿ ಉಳಿಸಿಕೊಳ್ಳುತ್ತೇನೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಬುಧವಾರ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಸಮೀಪದ ರಂಗೇನಹಳ್ಳಿ ಶ್ರೀ ಆಂಬಾಭವಾನಿ ಸಮುದಾಯ ಭವನದಲ್ಲಿ ನಡೆದ ಶಾಸಕ ಜಿ.ಎಚ್. ಶ್ರೀನಿವಾಸ್ ಹುಟ್ಟಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತರೀಕೆರೆ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲ ಕಡೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಅತ್ಯಂತ ಉತ್ಸಾಹದಿಂದ ನನ್ನ ಹುಟ್ಟಹಬ್ಬ ಅಚರಿಸುತ್ತಿರುವುದು ನನಗೆ ಸಂತೋಷ ತಂದಿದೆ. ಇದರಿಂದ ನನ್ನ ಜವಾಬ್ದಾರಿ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಇನ್ನೂ ಹೆಚ್ಚು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವುದಾಗಿ ತಿಳಿಸಿದರು.ಕೆ.ಪಿ.ಸಿ.ಸಿ.ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ ಶಾಸಕ ಜಿ.ಎಚ್.ಶ್ರೀನಿವಾಸ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕುರಿತು ಹೆಚ್ಚು ಕಾಳಜಿ ವಹಿಸಿ ಅನೇಕ ಅಬಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಕಾರ್ಯಕರ್ತರಿಂದ ಆಚರಿಸುತ್ತಿರುವ ಹುಟ್ಟುಹಬ್ಬ ಹೆಚ್ಚು ಅರ್ಥಪೂರ್ಣವಾಗಿದೆ ಎಂದ ಅವರು ಶಾಸಕ ಜಿ.ಎಚ್. ಶ್ರೀನಿವಾಸ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದರು.
ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ತರೀಕೆರೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹನೀಫ್, ಎಂ.ರಂಗಪ್ಪ, ಸೇವಾದಳ ತಾಲೂಕು ಅಧ್ಯಕ್ಷ ಜಗದೀಶ್, ಪವನ್ ಕಿಶೋರ್, ಶಾಂತಿಪುರ ರವಿ, ಗ್ರಾಪಂ ಸದಸ್ಯ ಶಿವಕುಮಾರ್, ಬಾವಿಕೆರೆ ವೆಂಕಟೇಶ್, ಸೀತಾರಾಮ್, ರಾಜೇಶ್ ಶೆಟ್ಟಿ, ಮುಡುಗೋಡು ಗ್ರಾಪಂ ಅಧ್ಯಕ್ಷೆ ರೂಪಾದೇವಿ ಪಾರ್ವತಮ್ಮ, ಸುನೀತಾ, ಪ್ರೇಮಾ, ಆಶಾ ಮತ್ತಿತರರು ಭಾಗವಹಿಸಿದ್ದರು.
ತರೀಕೆರೆ ಸಮೀಪದ ಲಕ್ಕವಳ್ಳಿಯಲ್ಲಿ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಹುಟ್ಟಹಬ್ಬ ಕಾರ್ಯಕ್ರಮ