ಕನ್ನಡಪ್ರಭ ವಾರ್ತೆ ಅಥಣಿ ಶೇಡಬಾಳ-ವಿಜಯಪುರ ರೈಲ್ವೆ ಮಾರ್ಗ ಅನುಷ್ಠಾನದ ಕುರಿತು ಪುನರ್ ಪರಿಶೀಲಿಸಿ ಸಂಸತ್ ಅಧಿವೇಶನದಲ್ಲಿ ಚರ್ಚಿಸುವ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಅಥಣಿ
ಶೇಡಬಾಳ-ವಿಜಯಪುರ ರೈಲ್ವೆ ಮಾರ್ಗ ಅನುಷ್ಠಾನದ ಕುರಿತು ಪುನರ್ ಪರಿಶೀಲಿಸಿ ಸಂಸತ್ ಅಧಿವೇಶನದಲ್ಲಿ ಚರ್ಚಿಸುವ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭರವಸೆ ನೀಡಿದರು.ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅಥಣಿ ಮತಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಅಭಿನಂದನಾ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅತ್ಯಂತ ಕಿರಿಯ ವಯಸ್ಸಿನಲ್ಲಿ ಜನಸೇವೆ ಮಾಡುವ ಅವಕಾಶ ನನಗೆ ದೊರಕಿದೆ. ರಾಜಕೀಯ ಅನುಭವ ಇರುವ ಸಂಸದರೊಂದಿಗೆ ಕಾರ್ಯನಿರ್ವಹಿಸುವ ಅವಕಾಶ ದೊರಕಿರುವುದು ನನಗೆ ಹೆಮ್ಮೆ ತಂದಿದೆ. ಇದಕ್ಕೆ ಅವಕಾಶ ಕಲ್ಪಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ತಂದೆಯವರಾದ ಸತೀಶ್ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಹಗಲಿರುಳು ಶ್ರಮಿಸಿ ಲೋಕಸಭಾ ಚುನಾವಣೆಯಲ್ಲಿ ನನಗೆ ಪ್ರಚಂಡ ಬಹುಮತ ಬರುವಂತೆ ಮಾಡಿದ ಪಕ್ಷದ ಎಲ್ಲ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿ ಪಟ್ಟಣಕ್ಕೆ ಬೇಕಾಗಿರುವುದು ಶೇಡಬಾಳ- ವಿಜಯಪುರ ರೈಲು ಮಾರ್ಗ ಬಹು ದಿನಗಳ ಬೇಡಿಕೆಯಾಗಿದೆ. ಅದನ್ನು ಪುನರ ಪರಿಶೀಲಿಸಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಯೋಜನೆಯ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.ಅಥಣಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಜನತೆಯ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಅಥಣಿ ಪಟ್ಟಣದಲ್ಲೊಂದು ಸಂಸದರ ಕಚೇರಿ ಪ್ರಾರಂಭಿಸಬೇಕೆಂದು ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರ ಪರವಾಗಿ ಮನವಿ ಮಾಡಿದರು.ಈ ವೇಳೆ ಮುಖಂಡರಾದ ದಿಗ್ವಿಜಯ ಪವಾರದೇಸಾಯಿ, ಸಿದ್ದಾರ್ಥ ಸಿಂಗೆ, ಸುರೇಶ ಗೌಡ ಪಾಟೀಲ, ರಾವಸಾಬ ಐಹೊಳೆ, ಚಿದಾನಂದ ಮುಕಣಿ, ,ರಮೇಶ ಸಿಂದಗಿ, ಅಸ್ಲಮ್ ನಾಲಬಂದ, ಅನೀಲ ಸುಣದೋಳಿ, ಸುನೀಲ ಸಂಕ, ಸಂಜು ಕಾಂಬಳೆ, ಚಿದಾನಂದ ತಳಕೇರಿ, ಸುನೀತಾ ಐಹೊಳಿ, ಪ್ರಮೋದ ಬಿಳ್ಳೂರ, ಉದಯ ಸೂಳಸಿ, ವಿಶ್ವನಾಥ ಗಡದೆ, ಕೌಶಿಫ್ ಸಾಂಗ್ಲೀಕರ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕೋಟ್..
ಮುಂಬರುವ ದಿನಗಳಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಲ್ಲ ಮತಕ್ಷೇತ್ರಗಳಿಗೆ ಭೇಟಿ ನೀಡಿ ಇಲ್ಲಿನ ಪ್ರಮುಖ ಬೇಡಿಕೆಗಳನ್ನ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
-ಪ್ರಿಯಾಂಕಾ ಜಾರಕಿಹೊಳಿ, ಚಿಕ್ಕೋಡಿ ಸಂಸದೆ.
ಬಾಕ್ಸ್...ಮಹಾತ್ಮರ ಪುತ್ಥಳಿಗೆ ಗೌರವ, ಶ್ರೀಗಳ ಆಶೀರ್ವಾದ ಪಡೆದ ಪ್ರಿಯಾಂಕಾಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಅಥಣಿ ಮತಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನ ಭೇಟಿ ಮಾಡಿ ಅಭಿನಂದನೆ ಸ್ವೀಕರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸೇರಿದಂತೆ ಅಥಣಿ ಪಟ್ಟಣದ ಎಲ್ಲ ಮಹಾತ್ಮರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು. ನಂತರ ಅಥಣಿಯ ಆರಾಧ್ಯ ದೈವ ಸಿದ್ದೇಶ್ವರ ದೇವಸ್ಥಾನ, ಸುಕ್ಷೇತ್ರ ಗಚ್ಚಿನಮಠ, ಮೋಟಗಿ ಮಠ ಮತ್ತು ಶೆಟ್ಟರ ಮಠಗಳಿಗೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.