ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುತ್ತೇನೆ

KannadaprabhaNewsNetwork |  
Published : Oct 14, 2026, 02:45 AM IST
ಬೆಳಗಾವಿ | Kannada Prabha

ಸಾರಾಂಶ

ಯಲ್ಲಮ್ಮ ದೇವಸ್ಥಾನಕ್ಕೆ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಹೆಚ್ಚಿನ ಮೂಲಸೌಕರ್ಯ ಕಲ್ಪಿಸುತ್ತೇನೆ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡುತ್ತೇನೆ ಎಂದು ಕೆಎಎಸ್‌ ಅಧಿಕಾರಿ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ರಾಜಶ್ರೀ ಜೈನಾಪುರ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಯಲ್ಲಮ್ಮ ದೇವಸ್ಥಾನಕ್ಕೆ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಹೆಚ್ಚಿನ ಮೂಲಸೌಕರ್ಯ ಕಲ್ಪಿಸುತ್ತೇನೆ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡುತ್ತೇನೆ ಎಂದು ಕೆಎಎಸ್‌ ಅಧಿಕಾರಿ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ರಾಜಶ್ರೀ ಜೈನಾಪುರ ಭರವಸೆ ನೀಡಿದರು.

ಯಲ್ಲಮ್ಮ ದೇವಸ್ಥಾನದಲ್ಲಿ ನೂತನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡದಲ್ಲಿ ಕೆಲವು ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿವೆ. ಏನೇ ಕಾನೂನು ತೊಡಕುಗಳಿದ್ದರೂ ಬಗೆಹರಿಸಿ ಅವುಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.ಯಲ್ಲಮ್ಮ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನ ಉಪಕಾರ್ಯದರ್ಶಿ ನಾಗರತ್ನಾ ಚೋಳಿನ, ಶೀತಲ ಕಡಟ್ಟಿ, ಅಲ್ಲಮಪ್ರಭು ಪ್ರಭುನವರ, ವಿರೇಶ ಬ್ಯಾಹಟ್ಟಿ, ಆ‌ರ್.ಎಸ್.ಸವದತ್ತಿ, ಸಿದ್ದನಗೌಡ ಪಾಟೀಲ ಹಾಗೂ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು.

ಶಾಸಕರ ಮಾರ್ಗದರ್ಶನದಲ್ಲಿ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಲ್ಲಮ್ಮನ ಗುಡ್ಡದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ. ಪ್ರಾಮಾಣಿಕತೆಯಿಂದ ಅಮ್ಮನ ಸೇವೆ ಮಾಡುವೆ.

-ರಾಜಶ್ರೀ ಜೈನಾಪುರ, ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನುವಾರುಗಳಿಗೆ ಬೇಕಿದೆ ಮೇವು ಬ್ಯಾಂಕ್
ಕಿತ್ತೂರು ಉತ್ಸವದ ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ