ರಾಜಕೀಯದಿಂದ ನಿವೃತ್ತಿಯಾಗುವೆ ಹೊರೆತು ಕಾಂಗ್ರೆಸ್ ಗೆ ಹೋಗಲ್ಲ

KannadaprabhaNewsNetwork |  
Published : Sep 18, 2026, 01:30 AM IST
17 ಟಿವಿಕೆ 1 – ತುರುವೇಕೆರೆ ತಾಲೂಕು ಮಲ್ಲಾಘಟ್ಟದಲ್ಲಿ ನಡೆದ ಇಂದಿರಾಗಾಂಧಿ ವಸತಿ ಶಾಲಾ ಕಟ್ಟಡ ಶಂಕುಸ್ಥಾಪನಾ ಸಮಾರಂಭದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿದರು. | Kannada Prabha

ಸಾರಾಂಶ

ನಾನು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆಯೇ ಹೊರೆತು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸ್ಪಷ್ಟಪಡಿಸಿದರು

ಕನ್ನಡಪ್ರಭ ವಾರ್ತೆ ತುರುವೇಕೆರೆ

ನಾನು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆಯೇ ಹೊರೆತು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಸ್ಪಷ್ಟಪಡಿಸಿದರು.

ತಾಲೂಕಿನ ಮಲ್ಲಾಘಟ್ಟದ ದೇವಾಲಯದ ಹಿಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ಕೆಲವರು ನಾನು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತೇನೆ. ಡಿ.ಕೆ.ಶಿವಕುಮಾರ್ ಪಟ್ಟಿ ರೆಡಿ ಮಾಡಿದ್ದಾರೆ. ಅದರಲ್ಲಿ ಎಂ.ಟಿ.ಕೃಷ್ಣಪ್ಪ ಸಹ ಒಬ್ಬರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲಾ ಸುಳ್ಳು. ಕೆಟ್ಟು ಹೋಗಿರುವ ಕಾಂಗ್ರೆಸ್ ಗೆ ನಾನ್ಯಾಕೆ ಹೋಗಲಿ. ಬೇಕಾದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ವಿನಃ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಹೇಳಿದರು. ತಾಲೂಕಿನಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಆದಷ್ಟು ಬೇಗ ಕಟ್ಟಡ ಕಾಮಗಾರಿ ಸಂಪೂರ್ಣಗೊಳ್ಳಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ಹೇಮಾವತಿ ನೀರು ತುಮಕೂರು ಜಿಲ್ಲೆಗೆ ಜೀವನಾಡಿಯಾಗಿದೆ. ಈಗ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ನೀರು ಬಿಡಲು ಮುಂದಾಗಿದ್ದಾರೆ. ಆದರೆ ಈ ಹಿಂದೆ ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿ ಸಚಿವ ಸಂಪುಟದಲ್ಲೇ ನಿರ್ಣಯಿಸಿದ್ದರು. ಇಂತಹ ತಾಕತ್ತು ಡಿ.ಕೆ.ಶಿವಕುಮಾರ್ ಗೆ ಇಲ್ಲ ಎಂದು ಎಂ.ಟಿ.ಕೃಷ್ಣಪ್ಪ ಮೂದಲಿಸಿದರು. ಸಭೆಯಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅರುಣಾ, ಪ್ರಾಂಶುಪಾಲ ಸತೀಶ್ ಜಮಾದಾರ್, ಮುಖಂಡರಾದ ಪುನಿತ್, ಶ್ರೀನಿವಾಸ್ ಗೌಡ, ಹೊಸಳ್ಳಿ ದೇವರಾಜ್, ಕಿರಣ್ ಕುಮಾರ್, ಬಿ.ಎಸ್.ದೇವರಾಜು, ಮೊರಸರಕೊಟ್ಟಿಗೆ ಕಾಂತರಾಜು, ಪಾಲಣ್ಣ, ವಿಜಯ ಕುಮಾರ್, ಪುಟ್ಟೇಗೌಡ, ಮಂಗೀಕುಪ್ಪೆ ಬಸವರಾಜು, ಹಾವಾಳ ಕೃಷ್ಣ, ಮಾಳೆ ದೇವರಾಜು, ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನುಗ್ಗೇಹಳ್ಳಿ ಸೊಸೈಟಿಗೆ ಅಧ್ಯಕ್ಷರಾಗಿ ಕಾರೇಕೆರೆ ಪ್ರಕಾಶ್‌ ಆಯ್ಕೆ
ಪ್ರವಾಸೋದ್ಯಮ ಅಭಿವೃದ್ಧಿಯಿಂದ ಜಿಲ್ಲೆಯ ಸೌಕರ್ಯ ಮೇಲ್ದರ್ಜೆಗೆ: ಸಾಗರ ಖಂಡ್ರೆ