ಅಧಿಕಾರ ಇರುವವರೆಗೆ ಜನಸೇವೆ ಮಾಡುತ್ತೇನೆ

KannadaprabhaNewsNetwork |  
Published : Oct 05, 2025, 01:00 AM IST
ಫೋಟೋ 4hlk 1: ಮುತ್ತುಗದೂರು ಗ್ರಾಮದಲ್ಲಿ ನೂತನ ಸಿ.ಸಿ.ರಸ್ತೆ ಹಾಗೂ ಬಸ್‍ನಿಲ್ದಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ. ಭೂಮಿ ಪೂಜೆ ನೆರವೇರಿಸಿದರು  | Kannada Prabha

ಸಾರಾಂಶ

ಮುತ್ತುಗದೂರು ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಹಾಗೂ ಬಸ್‍ ನಿಲ್ದಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.

ಕನ್ನಡ ಪ್ರಭ ವಾರ್ತೆ ಹೊಳಲ್ಕೆರೆ

ಅಧಿಕಾರ ಎಲ್ಲಿಯವರೆಗೂ ಇರುತ್ತದೋ ಅಲ್ಲಿಯವರೆಗೆ ಜನಸೇವೆಯಲ್ಲಿ ತೊಡಗಿರುತ್ತೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ತಾಲೂಕಿನ ಮುತ್ತುಗದೂರು ಗ್ರಾಮದಲ್ಲಿ 4.10 ಕೋಟಿ ರು.ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಮತ್ತು ಬಸ್‍ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.

ಭರಮಸಾಗರ ವಿಧಾನಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ ಸ್ಪರ್ಧಿಸಿದಾಗ ಓಡಾಡಲು ರಸ್ತೆಗಳಿರಲಿಲ್ಲ. ಗೆದ್ದ ಮೇಲೆ ಸರ್ಕಾರದಿಂದ ಹಣ ಮಂಜೂರು ಮಾಡಿಸಿಕೊಂಡು 385 ಹಳ್ಳಿಗಳಲ್ಲಿ ರಸ್ತೆ ಮಾಡಿಸಿದ್ದರಿಂದ ಜನ ರಸ್ತೆ ರಾಜ ಎಂಬ ಬಿರುದು ನೀಡಿ ಎರಡನೆ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದಾಗ ಯುವಕರು ನನ್ನನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿ ಮತ್ತೆ ಗೆಲ್ಲಿಸಿದರು.

ಹೊಳಲ್ಕೆರೆ ತಾಲೂಕಿನಾದ್ಯಂತ ಚೆಕ್‍ ಡ್ಯಾಂ, ಸಿಸಿ ರಸ್ತೆ, ಕೆರೆಕಟ್ಟೆಗಳು ಹಾಗೂ ಶಾಲಾ-ಕಾಲೇಜುಗಳನ್ನು ಕಟ್ಟಿಸಿದ್ದೇನೆ. ಸರ್ಕಾರದಲ್ಲಿ ನಾನು ಯಾವ ಬೇಡಿಕೆಯಿಟ್ಟರು ಐಎಎಸ್ ಅಧಿಕಾರಿಗಳು ಸ್ಪಂದಿಸಿ ಕೆಲಸ ಮಾಡುತ್ತಾರೆ. ಪ್ರತಿ ನಿತ್ಯವು ಒಂದಲ್ಲ ಒಂದು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುತ್ತವೆ. ಸಾರ್ವಜನಿಕರ ಬದುಕು ನನ್ನ ಸ್ವಂತ ಬದುಕು ಎಂದು ತಿಳಿದು ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆ ಎಂದರು.

ತರಿಗೆ ವಿದ್ಯುತ್ ಸಮಸ್ಯೆಯಾಗಬಾರದೆಂದು 17 ಕಡೆ ಕಿರು ವಿದ್ಯುತ್ ವಿತರಣಾ ಕೇಂದ್ರ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 13.5 ಎಕರೆ ಜಾಗದಲ್ಲಿ 500 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಜೋಗ್‍ಫಾಲ್ಸ್ ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ಇನ್ನೂ 50 ವರ್ಷಗಳ ಕಾಲ ರೈತರಿಗೆ ವಿದ್ಯುತ್ ತೊಂದರೆ ಕಾಡುವುದಿಲ್ಲ. 367 ಕೋಟಿ ರು. ಖರ್ಚು ಮಾಡಿ ಹಿರಿಯೂರಿನ ವಾಣಿ ವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಕೆ.ರುದ್ರಣ್ಣ, ಗ್ರಾಪಂ ಸದಸ್ಯರಾದ ಶಿವಕುಮಾರ್, ನಟರಾಜ್, ಪ್ರಭು, ಮಂಜುನಾಥ, ಶಿವಕುಮಾರ್, ಗ್ರಾಮದ ಪ್ರಮುಖರು ಹಾಜರಿದ್ದರು.

PREV

Recommended Stories

ಚಲನಚಿತ್ರ ಪ್ರಶಸ್ತಿ ಪಡೆದ ನಟ, ನಟಿ, ನಿರ್ದೇಶಕರ ಅಭಿಮತ
‘ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ’