ಕನ್ನಡ ನಾಡು, ನುಡಿ ಪರವಾಗಿ ನಿಲ್ಲುವೆ: ಸಂಸದೆ ಡಾ.ಪ್ರಭಾ

KannadaprabhaNewsNetwork |  
Published : Jun 13, 2024, 12:46 AM IST
ಕ್ಯಾಪ್ಷನಃ12ಕೆಡಿವಿಜಿ38ಃದಾವಣಗೆರೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ರನ್ನು ಅಭಿನಂದಿಸಿದರು. | Kannada Prabha

ಸಾರಾಂಶ

ಕನ್ನಡ ನಾಡು- ನುಡಿಯ ಪರವಾಗಿ ಸದಾ ನಿಲ್ಲುವುದಾಗಿ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ ಕನ್ನಡ ನಾಡು- ನುಡಿಯ ಪರವಾಗಿ ಸದಾ ನಿಲ್ಲುವುದಾಗಿ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಬುಧವಾರ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಅತಿ ಶೀಘ್ರವಾಗಿ ನಡೆಸಲು ಪ್ರಯತ್ನಿಸುವುದಾಗಿ ಜಿಲ್ಲಾ ಕಸಾಪ ಬಳಗಕ್ಕೆ ಭರವಸೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನ್ನುವ ಹೆಗ್ಗಳಿಕೆಗೆ ಡಾ. ಪ್ರಭಾ ಭಾಜನರಾಗಿದ್ದಾರೆ. ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಬೇಕು. ಈ ಹಿಂದೆ ದಿವಂಗತ ಜೆ.ಎಚ್. ಪಟೇಲರು ಕೂಡ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು ಎಂದು ಸ್ಮರಿಸಿದರು.

ಈ ಸಂದರ್ಭ ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಹಾಗೂ ಕಾರ್ಮಿಕ ನಾಯಕ ಕೆ.ರಾಘವೇಂದ್ರ ನಾಯರಿ, ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಎನ್.ಎಸ್. ರಾಜು, ಜ್ಯೋತಿ ಉಪಾಧ್ಯಾಯ, ಎಸ್.ಎಂ. ಮಲ್ಲಮ್ಮ, ರುದ್ರಾಕ್ಷಿ ಬಾಯಿ, ನಾಗರಾಜ್ ಸಿರಿಗೆರೆ, ದ್ಯಾಗಿನಕಟ್ಟೆ ಪರಮೇಶ್ವರಪ್ಪ, ಬೇತೂರು ಎಂ.ಷಡಾಕ್ಷರಪ್ಪ, ಆರ್.ಶಿವಕುಮಾರ್, ಪಂಕಜ, ಕುರ್ಕಿ ಸಿದ್ದೇಶ್, ಬಕ್ಕೇಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಶಿವಶಂಕರ ಮತ್ತಿತರರು ಉಪಸ್ಥಿತರಿದ್ದರು.

- - - -12ಕೆಡಿವಿಜಿ38ಃ:

ದಾವಣಗೆರೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರನ್ನು ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ