ಕನ್ನಡಪ್ರಭ ವಾರ್ತೆ ವಿಜಯಪುರ
ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಶನಿವಾರ ತವರು ಜಿಲ್ಲೆಗೆ ಆಗಮಿಸಿದ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರು ನೇರವಾಗಿ ನಗರದ ಸಿದ್ಧೇಶ್ವರ ಸ್ವಾಮೀಜಿಗಳ ಜ್ಞಾನಯೋಗಾಶ್ರಮಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಮಾತನಾಡಿದರು.
ಜ್ಞಾನಯೋಗಾಶ್ರಮದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸಚಿವರನ್ನು ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸಿದ್ಧೇಶ್ವರ ಸ್ವಾಮೀಜಿಯವರು ರಚಿಸಿದ ಮೊದಲ ಕೃತಿ ವಚನ ಚಿಂತನ ನೀಡಿ ಆಶೀರ್ವದಿಸಿದ ಬಸವಲಿಂಗ ಸ್ವಾಮೀಜಿ, 21 ವರ್ಷಗಳ ಹಿಂದೆ ಸಿದ್ಧೇಶ್ವರ ಸ್ವಾಮೀಜಿಗಳು ಇದೇ ದಿನದಂದು 9 ಜನರಿಗೆ ಸನ್ಯಾಸ ದೀಕ್ಷೆ ನೀಡಿದ್ದರು. ಇದೇ ದಿನ ಸಚಿವರು ಆಶ್ರಮಕ್ಕೆ ಭೇಟಿ ನೀಡಿದ ಯೋಗಾಯೋಗ ಬಂದಿದೆ. ನನ್ನ ಜೀವಮಾನದಲ್ಲಿ ಬೇಸಿಗೆಯಲ್ಲೂ ಹಳ್ಳಗಳು ತುಂಬಿ ಹರಿಯುತ್ತಿರುವುದನ್ನು ಕಂಡು ಸಂತಸವಾಗಿದೆ. ಇದಕ್ಕೆ ಸಚಿವ ಎಂ.ಬಿ. ಪಾಟೀಲ ಅವರು ಕೈಗೊಂಡಿರುವ ನೀರಾವರಿ ಯೋಜನೆಗಳು ಕಾರಣವಾಗಿವೆ. ಸಚಿವರು ಸಿದ್ಧೇಶ್ವರ ಸ್ವಾಮೀಜಿಗಳ ಮಾತನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಅಪ್ಪಟ ಭಕ್ತರಾಗಿದ್ದಾರೆ. ಶ್ರೀಗಳು ಹೇಳಿದಂತೆ ಎಂ.ಬಿ. ಪಾಟೀಲರು ಜನಮನದಲ್ಲಿ ಯಾವಾಗಲೂ ಜಲಸಂಪನ್ಮೂಲ ಸಚಿವರಾಗಿ ಉಳಿದಿದ್ದಾರೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ವ್ಯಕ್ತಿತ್ವ ಅವರಾಗಿದ್ದು, ಇನ್ನೂ ಉನ್ನತ ಸ್ಥಾನಕ್ಕೇರಲಿ ಎಂದು ಹಾರೈಸಿದರು.ಅಮೃತಾನಂದ ಸ್ವಾಮೀಜಿ ಬಾಲಗಾಂವ, ಹರ್ಷಾನಂದ ಸ್ವಾಮೀಜಿ, ಪ್ರಸಾದ ಸ್ವಾಮೀಜಿ, ಜಗನು ಮಹಾರಾಜ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮುಖಂಡರಾದ ಸಂಗು ಸಜ್ಜನ, ವಿ.ಸಿ.ನಾಗಠಾಣ, ಮಲ್ಲಿಕಾರ್ಜುನ ಹಳ್ಳದ, ಪಿ.ಎಸ್. ಬಿರಾದಾರ, ಘನಶ್ಯಾಮ ತೋಶ್ನಿವಾಲ, ಶಿವಾನಂದ ಸಂಖ, ವಿಠ್ಠಲಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ. ಜಯರಾಜ, ರಜಿಸ್ಟ್ರಾರ್ ಡಾ.ಆರ್.ವಿ. ಕುಲಕರ್ಣಿ, ಪ್ರಾಚಾರ್ಯೆ ತೇಜಶ್ವಿನಿ ವಲ್ಲಭ, ಹಿರಿಯ ಉಪಪ್ರಾಚಾರ್ಯ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ರವಿ ಬಿರಾದಾರ, ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎ. ಬಿರಾದಾರ (ಕನ್ನಾಳ), ವಿಲಾಸ ಬಗಲಿ, ಐ.ಎಸ್. ಕಾಳಪ್ಪನವರ, ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಉಪಸ್ಥಿತರಿದ್ದರು.
-ಎಂ.ಬಿ. ಪಾಟೀಲ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು